ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಿಸೆಂಬರ್ 31 ರ ರಾತ್ರಿ ಕೆಲ ಕಿಡಿಕೇಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಆತಂಕವಿದ್ದು, ಇದೇ ಕಾರಣಕ್ಕೆ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಅಂತೆಯೇ ಡಿಸೆಂಬರ್ 31ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿನ ಎಲ್ಲ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲು ನಿರ್ಧರಿಸಲಾಗಿದೆ. ಅಂತೆಯೇ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಇದೇ ವೇಳೆ ಎಚ್ಚರಿಕೆ ನೀಡಿದರು.