2016ರ ಜೂನ್ ತಿಂಗಳಿನಲ್ಲಿ ಧಾರವಾಡದಲ್ಲಿ ದುಷ್ಕರ್ಮಿಗಳ ತಂಡವೊಂದು ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಿತ್ತು. ಬಳಿಕ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದರು. ಪತಿ ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸದಿದ್ದಕ್ಕೆ ತೀವ್ರವಾಗಿ ಅಸಮಾಧಾನವನ್ನು ಹೊರಹಾಕಿದ್ದರು. ಇದಲ್ಲದೆ. ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಸಚಿವ ವಿನಯ್ ಕುಲಕರ್ಣಿಯವರ ಮೇಲೂ ಆರೋಪ ಮಾಡಿದ್ದರು.