ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಡಿಕೆ ಶಿವಕುಮಾರ್

ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು ಯಾವುದೇ ಕಾರಣಕ್ಕೂ ....
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು: ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಗ್ರಾಹಕಸ್ನೇಹಿ ಬೆಸ್ಕಾಂ ಮಿತ್ರ ಆಪ್ ಉದ್ಘಾಟಿಸಿ ಮಾತನಾಡಿದ ಅವರು, ಈ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ 2 ರೂಪಾಯಿ 50 ಪೈಸೆಗೆ ವಿದ್ಯುತ್ ಕೊಡಿಸುವುದಾಗಿ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದುವರೆಗೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪ್ರಸರಣ ವೆಚ್ಚ ಹೆಚ್ಚಿದ್ದು ರಾಜ್ಯ 700 ಕೋಟಿ ರೂಪಾಯಿ ಹೆಚ್ಚಿನ ವೆಚ್ಚ ಭರಿಸುತ್ತಿದೆ. ಇದನ್ನು ಕೇಂದ್ರ ಸರ್ಕಾರ ಸರಿಪಡಿಸಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com