ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಿಎಂ ಸಿದ್ದರಾಮಯ್ಯ, ಪ್ರಕಾಶ್ ರೈ ಆಯ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಟ ಪ್ರಕಾಶ್ ರೈ ಈ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆಯಾಗಿದ್ದಾರೆ.
ಸಿದ್ದರಾಮಯ್ಯ, ಪ್ರಕಾಶ್ ರೈ ಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ
ಸಿದ್ದರಾಮಯ್ಯ, ಪ್ರಕಾಶ್ ರೈ ಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ
Updated on
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಟ ಪ್ರಕಾಶ್ ರೈ ಈ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಡಿ.31ರಂದು  ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
ಸಿದ್ದಗಂಗಾ ಶ್ರೀಗಳಿಗೆ 'ಶತಮಾನದ ಶ್ರೀ'
ತುಮಕೂರು ಸಿದ್ಧಗಂಗಾ ಮಠದ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರನ್ನು 'ಶತಮಾನ ಶ್ರೀ' ಪ್ರಶಸ್ತಿ ನೀಡಿ ಗೌರವಿಸಲು ಪ್ರೆಸ್‌ಕ್ಲಬ್‌ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.
ಸಂಸ್ಥೆ ಪ್ರತಿವರ್ಷ ಕೊಡಮಾಡುವ 'ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ' ಮತ್ತು 'ಪ್ರೆಸ್‌ಕ್ಲಬ್‌ ವಾರ್ಷಿಕ ಪ್ರಶಸ್ತಿ'ಗೆ ಅರ್ಹರನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಕ್ಲಬ್ ನ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆಗೊಂದವರ ವಿವರ ಹೀಗಿದೆ-
ಪ್ರಸಾರ ಭಾರತಿ ಅಧ್ಯಕ್ಷ ಡಾ. ಎ. ಸೂರ್ಯಪ್ರಕಾಶ್, ಹಿರಿಯ ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಅರೆಕೆರೆ ಜಯರಾಂ, ಬಿ.ವಿ. ಮಲ್ಲಿಕಾರ್ಜುನಯ್ಯ, ಸುಗತ ಶ್ರೀನಿವಾಸರಾಜು, ಈಶ್ವರ ದೈತೋಟ, ಎಚ್.ಆರ್. ರಂಗನಾಥ, ಆಯೇಷಾ ಖಾನಮ್, ಕೆ. ವೆಂಕಟೇಶ್, ವಿ. ರಾಮಸ್ವಾಮಿ ಕಣ್ವ, ಮಂಜುನಾಥ ಅದ್ದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com