ಯೋಗಿ ಆದಿತ್ಯನಾಥ್ ರನ್ನು ಕರ್ನಾಟಕಕ್ಕೆ ಸ್ಟಾರ್ ಪ್ರಚಾರಕರಾಗಿ ಕರೆತರಲು ಬಿಜೆಪಿ ಯೋಜನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾರತೀಯ ಜನತಾ ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on: 
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾರತೀಯ ಜನತಾ ಪಾರ್ಟಿಯ ಸ್ಟಾರ್ ಪ್ರಚಾರಕರಾಗಿದ್ದಾರೆ.
ಇತ್ತೀಚೆಗೆ ಮುಗಿದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ 35 ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಅವುಗಳಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿವೆ.
ಪಕ್ಷದ ಆಂತರಿಕ ಸಮೀಕ್ಷೆ ಪ್ರಕಾರ, ಬಿಜೆಪಿ ಗುಜರಾತ್ ರಾಜ್ಯದಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಮೂರು ಭಾಗಗಳಾಗಿ ವಿಭಾಗಿಸಿತ್ತು. ಆದಿತ್ಯನಾಥ್ ಅವರು ಬಿ ಮತ್ತು ಸಿ ವಿಭಾಗಗಳಲ್ಲಿ ಪ್ರಚಾರ ನಡೆಸಿದ್ದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಎ ವಿಭಾಗಗಳಲ್ಲಿ ಪ್ರಚಾರ ನಡೆಸಿದ್ದರು.
ಗುಜರಾತ್ ನಲ್ಲಿ ಆದಿತ್ಯನಾಥ್ ಅವರು 35 ರ್ಯಾಲಿಗಳನ್ನು, ನರೇಂದ್ರ ಮೋದಿ ಹಾಗೂ ಅಮಿತ್ ಶಾ 34 ರ್ಯಾಲಿಗಳು ಮತ್ತು 31 ಸಾರ್ವಜನಿಕ ಸಭೆಗಳನ್ನು ನಡೆಸಿದ್ದರು ಎಂದು ಬಿಜೆಪಿ ಉನ್ನತ ಕಾರ್ಯಕಾರಿ ಅಧಿಕಾರಿ ತಿಳಿಸಿದ್ದಾರೆ. 
ಗುಜರಾತ್ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಅವರ ಚರಿಷ್ಮಾ ಕೆಲಸ ಮಾಡಿದ್ದು ಇದೀಗ ಅವರನ್ನು ಕರ್ನಾಟಕ ರಾಜ್ಯದಲ್ಲಿ ಪಕ್ಷದ ಪ್ರಮುಖ ಪ್ರಚಾರಕರನ್ನಾಗಿ ಕರೆತರಲು ಕೇಂದ್ರ ನಾಯಕರು ಚಿಂತಿಸುತ್ತಿದ್ದಾರೆ.
ಹಿಂದುತ್ವ ರಾಜಕೀಯದ ಸಹಜ ಪ್ರಚಾರಕ ಆದಿತ್ಯನಾಥ್ ಅವರು. ಅವರು ಪಕ್ಷದ ಹಿಂದುತ್ವದ ಜಾಗವನ್ನು ತುಂಬುತ್ತಾರೆ. ಆದಿತ್ಯನಾಥ್ ಅವರನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಲು ಕರ್ನಾಟಕ ಸಜ್ಜಾಗಿದೆ ಎಂದು ಪಕ್ಷದ ನಾಯಕರೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com