ಬೆಂಗಳೂರು: ಹಾಡಹಗಲೇ ಎಪಿಎಂಸಿ ಅಧ್ಯಕ್ಷನ ಮೇಲೆ ಫೈರಿಂಗ್ : ಇಬ್ಬರಿಗೆ ಗಾಯ

ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷನನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಿರುವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷನನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಿರುವ ಘಟನೆ ಯಲಹಂಕದ ಕೋಗಿಲು ಕ್ರಾಸ್‌ನಲ್ಲಿ ನಡೆದಿದೆ.

ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೂರ್ತಿ ಅಲಿಯಾಸ್ ಡಾಬಾ ಸೀನನ ಮೇಲೆ ಆರು ಸುತ್ತು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಹೆಬ್ಬಾಳದ ಕೋಗಿಲು ಕ್ರಾಸ್ ಬಳಿ ಪಲ್ಸರ್‌‌ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಾರಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಶ್ರೀನಿವಾಸ್ ಮೂರ್ತಿ ಹಾಗೂ ಆತನ ಕಾರು ಚಾಲಕ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಈಶಾನ್ಯ ವಿಭಾಗದ ಡಿಸಿಪಿ ಹರ್ಷ ಮತ್ತು ಯಲಹಂಕ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಸನಪುರ ಎಪಿಎಂಸಿ ಅಧ್ಯಕ್ಷನಾಗಿದ್ದ ಶ್ರೀನಿವಾಸ್ ಮೂರ್ತಿ ರೌಡಿ ಶೀಟರ್ ಆಗಿದ್ದ. ಈತ ರೌಡಿ ಪಾಯ್ಸನ್ ರಾಮನ ಸ್ವಂತ ಅಣ್ಣನಾಗಿದ್ದಾನೆ.

ಈ ಮೊದಲು ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀನಿವಾಸ್, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ. ಈತನ ವಿರುದ್ಧ ಹಲವು ಠಾಣೆಗಳಲ್ಲೂ  13 ಪ್ರಕರಣ ದಾಖಲಾಗಿವೆ.

ಇನ್ನೂ ಪಲ್ಸರ್ ಬೈಕ್ ನಲ್ಲಿ  ಮಾಸ್ಕ್ ಹಾಕಿಕೊಂಡು ಬಂದಿದ್ದ ದುಷ್ಕರ್ಮಿಗಳು ಶ್ರೀನಿವಾಸ್ ಮೂರ್ತಿ ಪ್ರಯಾಣಿಸುತ್ತಿದ್ದ ಕೆಎ-04 ಎಂ ಎಸ್ 605 ಸರ್ಕಾರಿ ಕಾರಿನ  ಮೇಲೆ ಫೈರಿಂಗ್ ಮಾಡಿದ್ದಾರೆ. ಒಟ್ಟು ಆರು ಸುತ್ತು ಗುಂಡಿನ ದಾಳಿ ನಡೆದಿದ್ದು ಎರಡು ಬುಲೆಟ್ ಶ್ರೀನಿವಾಸ್ ಗೆ ದೇಹ ಹೊಕ್ಕಿವೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com