ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವ ಭೋಜ ನಾಯ್ಕ, ಕಾಲೇಜು ಕ್ಯಾಂಪಸ್ ನಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ ಎಂದು ಹೇಳಿದ್ದಾರೆ. ಸಮವಸ್ತ್ರ ಕಡ್ಡಾಯಕ್ಕಾಗಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ವಿದ್ಯಾರ್ಥಿಗಳ ಮತ್ತೊಂದು ಗುಂಪು ವಿರೋಧ ವ್ಯಕ್ತಪಡಿಸಿದ್ದು, ಘರ್ಷಣೆ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ, ನಂತರ ಕಾಲೇಜು ಆಡಳಿತ ಮಂಡಳಿ ಒಂದು ದಿನ ರಜೆ ಘೋಷಿಸಿದ್ದು, ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಸಭೆ ನಡೆಸಲಾಗಿದೆ.