ಬೆಂಗಳೂರು: 9 ತಿಂಗಳಿನಿಂದ 15 ವರ್ಷದವರೆಗಿನ ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಕಾಯಿಲೆ ಬಾರದಂತೆ ತಡೆಗಟ್ಟಲು ಈ ತಿಂಗಳ 7ರಿಂದ 28ರವರೆಗೆ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಪಿ.ಎಸ್.ಕಾಂತರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 7ರಿಂದ 28ರವರೆಗೆ ಎಲ್ಲ ಸರ್ಕಾರಿ ಆಸ್ಪತ್ರೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳು ಸೇರಿದಂತೆ 6379 ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಲಾಗುತ್ತದೆ ಎಂದರು.
ಇಂದು ಬೆಂಗಳೂರಿನಲ್ಲಿ ಈ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ.