ಮರಳು ಸಾಗಾಟ ಆರೋಪಿ ಲಾಕಪ್ ಡೆತ್?: ಲಕ್ಷ್ಮೇಶ್ವರದಲ್ಲಿ ಉದ್ವಿಗ್ನ ಪರಿಸ್ಥಿತಿ

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್‌ ಠಾಣೆಯಲ್ಲಿ ಲಾರಿ ಚಾಲಕನೊಬ್ಬನ ಲಾಕಪ್‌ ಡೆತ್‌ ಆಗಿರುವ ಆರೋಪ ಕೇಳಿ ಬಂದಿದ್ದು ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗದಗ: ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್‌ ಠಾಣೆಯಲ್ಲಿ ಲಾರಿ ಚಾಲಕನೊಬ್ಬನ ಲಾಕಪ್‌ ಡೆತ್‌ ಆಗಿರುವ ಆರೋಪ ಕೇಳಿ ಬಂದಿದ್ದು ಗ್ರಾಮದಲ್ಲಿ  ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಟೂರ ಗ್ರಾಮದ  ಶಿವಪ್ಪ ಗೂಳಿ(21) ಎಂಬ ಲಾರಿ ಚಾಲಕನನ್ನು ಅಕ್ರಮ ಮರಳು ಸಾಗಾಣಿಕೆ ಆರೋಪದಲ್ಲಿ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದು, ಆ ಬಳಿಕ ಪೊಲೀಸರ ಥಳಿತದಿಂದ ತೀವ್ರವಾಗಿ ಗಾಯಗೊಂಡು ಠಾಣೆಯಲ್ಲೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಭಾನುವಾರ ಬೆಳಗ್ಗೆ ಲಕ್ಷ್ಮೇಶ್ವರ ಠಾಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ರಿಕ್ತ ಜನರು ಠಾಣೆಯ ಮೇಲೆಯೆ ದಾಳಿ ನಡೆಸಿದ್ದು ಪೊಲೀಸ್‌ ಠಾಣೆ, ಜೀಪ್‌ಗೆ ಬೆಂಕಿ ಹಚ್ಚಿದ್ದಾರೆ. ಠಾಣೆಯ ಪೀಠೊಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

ಠಾಣೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com