ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ಕೇಸ್: ಲೇಖಕ ಅಗ್ನಿ ಶ್ರೀಧರ್ ಮನೆಯಲ್ಲಿ ಪೊಲೀಸರ ಶೋಧ

ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಅಲಿಯಾಸ್ ಒಂಟೆಯ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ...
ಅಗ್ನಿ ಶ್ರೀಧರ್
ಅಗ್ನಿ ಶ್ರೀಧರ್

ಬೆಂಗಳೂರು: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಅಲಿಯಾಸ್ ಒಂಟೆಯ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಲೇಖಕ ಅಗ್ನಿ ಶ್ರೀಧರ್ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.

ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದ ಪೊಲೀಸರು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಗ್ನಿ ಶ್ರೀಧರ್ ಮನೆಯಲ್ಲಿ ರೋಹಿತ್ ಗಾಗಿ ಶೋಧ ನಡೆಸಿದ್ದಾರೆ. ಫೈರಿಂಗ್ ಪ್ರಕರಣದಲ್ಲಿ ರೋಹಿತ್ ಭಾಗಿಯಾಗಿರಬಹುದೆಂಬ ಶಂಕೆಯ ಹಿನ್ನೆಲೆಯಲ್ಲಿ  ಪೊಲೀಸರು ಶೋಧ ನಡೆಸಿದ್ದರು. ಈ ವೇಳೆ ಶ್ರೀಧರ್ ಮನೆಯಲ್ಲಿ ಲೈಸೆನ್ಸ್ ಇಲ್ಲದ ಪಿಸ್ತೂಲ್ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ನಿನ್ನೆ ರಾತ್ರಿ ರೋಹಿತ್ ಅಗ್ನಿ ಶ್ರೀಧರ್ ಮನೆಯಲ್ಲಿಯೇ ಇದ್ದ, ಆದರೆ ಪೊಲೀಸರು ದಾಳಿ ನಡೆಸಬಹುದೆಂಬ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ,  ಕಡಬಗೆರೆ ಸೀನನ ಆಪ್ತ ರಮೇಶ್‍ಗೆ ರೌಡಿ ರೋಹಿತ್ ಬೆದರಿಕೆ ಹಾಕಿದ್ದ. ಶೂಟೌಟ್ ನಡೆಯುವುದಕ್ಕೂ 4 ದಿನ ಮೊದಲು ರಮೇಶ್ ಮತ್ತು ಕಡಬಗೆರೆ ಶ್ರೀನಿವಾಸ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ, ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com