

ಕೊಪ್ಪಳ: ಪಾಲಕನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆಯೊಂದು ಕೊಪ್ಪಳ ಜಿಲ್ಲೆ ಬಸ್ರಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕೃಷ್ಣಪ್ಪ ಬಾಲಕಿಯ ಮೇಲೆ ನಿಂತರವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಯಾಗಿದ್ದಾನೆ. ವೃತ್ತಿಯಲ್ಲಿ ಕಾರ್ಮಿಕನಾಗಿರುವ ಈತ ಸರ್ಕಾರಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು ತಿಳಿದುಬಂದಿದೆ.
ತಂದೆ ಹಾಗೂ ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿಯನ್ನು ಕೃಷ್ಣಪ್ಪ ತಾನು ನೋಡಿಕೊಳ್ಳುವುದಾಗಿ ಹೇಳಿ ಮನೆಯಲ್ಲಿ ಇರಿಸಿಕೊಂಡಿದ್ದ. ಈ ವೇಳೆ ಬಾಲಕಿಗೆ ಬೆದರಿಗೆ ಹಾಕಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದೀಗ ಬಾಲಕಿ ಗರ್ಭಿಣಿಯಾಗಿದ್ದು, ಸ್ಥಳೀಯರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.