ಚುನಾವಣೆ ಮೇಲೆ ಸಿಎಂ ಕಣ್ಣು: ಅನ್ನಭಾಗ್ಯ ಯೋಜನೆಯಡಿ 3 ಕೆಜಿ ಹೆಚ್ಚುವರಿ ಅಕ್ಕಿ

ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರ ಬಡಜನರ ಮತಗಳನ್ನು ಪಡೆಯಲು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಏಪ್ರಿಲ್ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರ ಬಡಜನರ ಮತಗಳನ್ನು ಪಡೆಯಲು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಏಪ್ರಿಲ್ ತಿಂಗಳಿನಿಂದ ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುವ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸದ್ಯಕ್ಕೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕಾರ್ಡುಗಾರರಿಗೆ ಸಿಗುತ್ತಿರುವ 5 ಕೆಜಿ ಅಕ್ಕಿ ಬದಲಿಗೆ, ಏಪ್ರಿಲ್ ನಿಂದ ತಲಾ 8 ಕೆಜಿ ಅಕ್ಕಿ ಸಿಗಲಿದೆ.

ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ''2018ರ ಚುನಾವಣೆ ಹಾಗೂ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರವು ಮಂಡಿಸಲಿರುವ ಬಜೆಟ್ ಹಿನ್ನೆಲೆಯಲ್ಲಿ ರಾಜ್ಯದ ಬಡವರು ಸರ್ಕಾರದಿಂದ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರ ಬಡವರ ಪರವಾಗಿ ಯೋಜನೆಗಳನ್ನು ರೂಪಿಸಬೇಕಿದೆ'' ಎಂದರು. ಈ ಹಿನ್ನೆಲೆಯಲ್ಲಿ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ಈಗ ಸಿಗುತ್ತಿರುವ ಅಕ್ಕಿ ಕೋಟಾಕ್ಕಿಂತ ಹೆಚ್ಚವರಿಯಾಗಿ 3 ಕೆಜಿ ಅಕ್ಕಿ ಸಿಗಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಶಾಲೆಗಳಲ್ಲಿ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ  ವಾರದ ಆರು ದಿನಗಳು ಹಾಲು ನೀಡಲು ನಿರ್ಧರಿಸಲಾಗಿದೆ. ಇನ್ನೂ ಎಲ್ ಪಿಜಿ ಸಂಪರ್ಕ ಹೊಂದಿರುವವರು ಸೀಮೆಎಣ್ಣೆ ನೀಡಬೇಕೆಂಬ ಬೇಡಿಕೆಯನ್ನು ಮುಂಬರುವ ಬಜೆಟ್ ನಲ್ಲಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

ಬರ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡುವುದು ಹಾಗೂ ನೀರಿಗಾಗಿ ಬೋರ್ ವೆಲ್ ಕೊರೆಸುವುದು ಸೇರಿದಂತೆ ಜಾನುವಾರುಗಳಿಗಾಗಿ ಗೋಶಾಲೆ ನಿರ್ಮಿಸುವ ಸಂಬಂಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com