ಅಗ್ನಿ ಶ್ರೀಧರ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ...
ಅಗ್ನಿ ಶ್ರೀಧರ್
ಅಗ್ನಿ ಶ್ರೀಧರ್
ಬೆಂಗಳೂರು: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ಅಗ್ನಿ ಶ್ರೀಧರ್‌ ಅವರಿಗೆ ಸೆಷನ್ಸ್ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಗ್ನಿ ಶ್ರೀಧರ್ ಅವರು ಸದ್ಯ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಧನದ ಭೀತಿಯಿಂದ ಆಸ್ಪತ್ರೆಯಿಂದಲೇ ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್, 15 ದಿನಗಳ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.
ರೌಡಿಗಳಿಗೆ ಆಶ್ರಯ ನೀಡಿದ್ದ ಮಾಹಿತಿ ಮೇರೆಗೆ ಇತ್ತೀಚೆಗೆ ಪೊಲೀಸರು ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ, ವಿದೇಶಿ ಮದ್ಯ ದೊರಕಿತ್ತು. ಈ ವೇಳೆ ಮನೆಯಲ್ಲಿ ನಡೆದಿದ್ದ ಹೈಡ್ರಾಮಾದ ಬಳಿಕ ಅಗ್ನಿ ಶ್ರೀಧರ್ ಅತಿಯಾದ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಶ್ರೀಧರ್ ಆಪ್ತ, ಬಲಗೈ ಬಂಟ ಬಚ್ಚನ್ ಸೇರಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com