ಸಾಂದರ್ಭಿಕ ಚಿತ್ರ
ರಾಜ್ಯ
ಮೈಸೂರು: ಶ್ರೀಗಂಧ ಕಳ್ಳರ ಮೇಲೆ ಶೂಟೌಟ್, ಓರ್ವ ಸಾವು
ಶ್ರೀಗಂಧ ಮರ ಕದಿಯಲು ಬಂದಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ...
ಮೈಸೂರು: ಶ್ರೀಗಂಧ ಮರ ಕದಿಯಲು ಬಂದಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದಾನೆ.
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಲಿಂಗಾಬುದಿ ಕೆರೆ ಆವರಣದಲ್ಲಿ ಮಧ್ಯರಾತ್ರಿ ಎರಡೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಕಾರ್ಯಾಚರಣೆ ಹಿನ್ನೆಲೆಯಲ್ಲಿ ಲಿಂಗಾಬುದಿ ಕೆರೆಯ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
೫ ಕ್ಕೂ ಹೆಚ್ಚು ಮಂದಿಯಿದ್ದ ಶ್ರೀಗಂಧ ಚೋರರ ತಂಡ ಮರಕಳವಿಗೆ ಯತ್ನಿಸಿದ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ