
ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 400 ಹೊಸ ಖಾಸಗಿ ಪಿಯುಸಿ ಕಾಲೇಜುಗಳು ಸ್ಥಾಪನೆಯಾಗಲಿವೆ.
ಅನುದಾನ ರಹಿತ ಕಾಲೇಜು ಸಂಸ್ಥೆಗಳು ಕಾಲೇಜು ಸ್ಥಾಪನೆಗೆ ಅನುಮತಿ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆಗೆ 444 ಅರ್ಜಿಗಳನ್ನು ಸಲ್ಲಿಸಿವೆ, ಅದರಲ್ಲಿ ಶೇ. 90 ರಷ್ಟು ಅರ್ಜಿಗಳಿಗೆ ಸರ್ಕಾರ ಅನುಮತಿ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂದಿರುವ ಎಲ್ಲಾ ಅರ್ಜಿಗಳಲ್ಲಿ ಅವಶ್ಯಕತೆಯಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಅಂಥಹ ಕಾಲೇಜುಗಳಿಗೆ ಶೀಘ್ರವೇ ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ. 2004 ರಲ್ಲಿ ಸರ್ಕಾರ ಹೊಸ ಕಾಲೇಜುಗಳಿಗೆ ಅನುಮತಿ ನೀಡುವುದನ್ನು ರದ್ಧುಗೊಳಿಸಿತ್ತು,.
ಕೆಲವೊಮ್ಮೆ ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಕಾಲೇಜು ಸ್ಥಾಪನೆ ಮಾಡುವಂತೆ ಒತ್ತಡ ಹೇರುತ್ತಿದ್ದರು. ಇಂತಹ ಹಲವು ಅರ್ಜಿಗಳನ್ನು ಸ್ವೀಕರಿಸುವುದನ್ನು ಇಲಾಖೆ ನಿರ್ಧರಿಸಿತ್ತು.
ಈಗಾಗಲೇ ರಾಜ್ಯದಲ್ಲಿ 5,009 ಪಿಯು ಕಾಲೇಜುಗಳಿವೆ, ಮತ್ತೆ 400 ಕಾಲೇಜು ಸ್ಥಾಪನೆಯ ಅವಶ್ಯಕತೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ, ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಾಲೇಜುಗಳ ಸ್ಥಾಪನೆಗೆ ಅವಕಾಶ ನೀಡಲಾಗುತ್ತಿದೆ. ಸರ್ಕಾರ ಅನುಮತಿ ನೀಡುವುದನ್ನು ನಾವು ವಿರೋಧಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
Advertisement