ಸೌಜನ್ಯ ಅತ್ಯಾಚಾರ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಗೆ ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದಲ್ಲಿ  ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಚುನಾ ಆರೋಪಿ ಪರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಮಾನಸಿಕವಾಗಿ ಅಸ್ವಸ್ಥನಾಗಿರುವ ಸಂತೋಷ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು.

ಪ್ರಕರಣ ದ ಮರು ತನಿಖೆ ನಡೆಸುವಂತೆ ಇತ್ತೀಚೆಗೆ ಸಿಬಿಐ ಕೋರ್ಟ್ ಆದೇಶ ನೀಡಿತ್ತು. ಸಂತ್ರಸ್ತೆ ತಂದೆ ಚಂದಪ್ಪಗೌಡ ಚಾರ್ಜ್ ಶೀಟ್ ನಲ್ಲಿರುವ ಲೋಪದೋಷಗಳನ್ನು ನ್ಯಾಯಾಲಯದ ಗಮನಕ್ಕೆ ತಂದ ಕಾರಣ ಮರು ತನಿಖೆಗೆ ಕೋರ್ಟ್ ಆದೇಶಿಸಿದೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com