ರಕ್ಷಣಾ ವಲಯದ ಉತ್ಪಾದನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ: ಮನೋಹರ್ ಪರಿಕ್ಕರ್

ರಕ್ಷಣಾ ವಲಯದ ವಸ್ತುಗಳ ಉತ್ಪಾದನೆಗೆ ಖಾಸಗಿ ಕಂಪೆನಿಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು...
ಪ್ರದರ್ಶನಕ್ಕೆ ಚಾಲನೆ ನೀಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮತ್ತು ಇತರರು
ಪ್ರದರ್ಶನಕ್ಕೆ ಚಾಲನೆ ನೀಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮತ್ತು ಇತರರು
ಬೆಂಗಳೂರು: ರಕ್ಷಣಾ ವಲಯದ ವಸ್ತುಗಳ ಉತ್ಪಾದನೆಗೆ ಖಾಸಗಿ ಕಂಪೆನಿಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಅವರು ಇಂದು ಯಲಹಂಕ ವಾಯುನೆಲೆಯಲ್ಲಿ ಏರೋ-ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಏಷ್ಯಾದಲ್ಲಿಯೇ ಒಂದು ಉತ್ತಮ ವೈಮಾನಿಕ ಪ್ರದರ್ಶನ ಎಂದು ಹೇಳಿದ ಸಚಿವರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯವಹಾರ ಸಂಸ್ಥೆಗಳಿಗೆ ಇದೊಂದು ವ್ಯಾಪಾರ, ಹೂಡಿಕೆ ಮತ್ತು ಪ್ರದರ್ಶನ ಕೇಂದ್ರವಾಗಿದೆ ಎಂದು ಹೇಳಿದರು.
ಈ ಬಾರಿಯ ವೈಮಾನಿಕ ಪ್ರದರ್ಶನದಲ್ಲಿ ಸ್ಟಾರ್ಟ್ ಅಪ್ ಕಂಪೆನಿಗಳಿಗೆ ಒತ್ತು ನೀಡಲಾಗುತ್ತಿದ್ದು, ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮಾಡಿ ಮುಗಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.
ರಕ್ಷಣಾ ವಲಯದಲ್ಲಿ ಉತ್ಪಾದನೆ, ವಿನ್ಯಾಸ ಮತ್ತು ಸಂಶೋಧನೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ.ಭಾರತದಲ್ಲಿ ಪ್ರಸ್ತುತ ರಕ್ಷಣಾ ವಲಯದಲ್ಲಿನ ಉತ್ಪಾದನೆಗೆ ಪರಿಸ್ಥಿತಿ ಅನುಕೂಲವಾಗಿದೆ. ತಾಂತ್ರಿಕ ವಿಸ್ತರಣೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಸಚಿವರು ಹೇಳಿದರು.
ವಿದೇಶಿ ಕಂಪೆನಿಗಳ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡ ಸಚಿವರು, ರಕ್ಷಣಾ ಹೂಡಿಕೆಗೆ ಬಂಡವಾಳ ಹರಿದುಬರುವಂತ ವಾತಾವರಣ ನಿರ್ಮಿಸಿಕೊಡಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಪಸ್ಥಿತಿಯಲ್ಲಿ ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com