ಈ ಮಧ್ಯೆ, ಈ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ, 235 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿಲ್ಲ, ಅಲ್ಲಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಎರಡು ವಾರ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ನಿಯಮ ಪಾಲಿಸದಿದ್ದರೆ ಅಂತಹ ಕೇಂದ್ರಗಳನ್ನು ರದ್ದುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.