ರಾಜ್ಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಹಾಸನ/ಮೈಸೂರು:  ಬಹು ನಿರೀಕ್ಷಿತ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದ ಅರಸೀಕೆರೆಯಲ್ಲಿ 121 ಕೋಟಿ ರು ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ. ಆದರೆ ಈ ಯೋಜನೆಯಿಂದ ನೆರೆರಾಜ್ಯ ತಮಿಳುನಾಡಿಗೂ ಉಪಯೋಗವಾಗಲಿದೆ ಎಂದು ಅವರು ಹೇಳಿದ್ದಾರೆ.
ಮೇಕೆದಾಟು ಯೋಜನೆಗಾಗಿ ಸರ್ಕಾರ 5,900 ಕೋಟಿ ವೆಚ್ಚ ಮಾಡಲು ನಿರ್ಧರಿಸಿದೆ, ಯೋಜನೆ ರೂಪುರೇಷೆಯನ್ನು ಕೇಂದ್ರಕ್ಕೆ ಕಳುಹಿಸಿದ್ದು, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರ ಬಜೆಟ್ ನಲ್ಲಿ  5 ಸಾವಿರ ಕೋಟಿಯನ್ನು ಮೇಕೆದಾಟು ಯೋಜನೆಗೆ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ.ಮೇಕೆದಾಟು ಯೋಜನೆಯಲ್ಲಿ ಸರ್ಕಾರ ಚುನಾವಣೆ ಗಿಮಿಕ್ ಮಾಡುವುದನ್ನು ಬಿಟ್ಟು, ರಾಜಕೀಯ ಬದ್ಧತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.