ಕಲಬುರಗಿ: ಶ್ರೀರಾಮಸೇನೆ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶ್ರೀರಾಮ ಸೇನೆ ಮುಖಂಡನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಕಲಬುರಗಿ: ಶ್ರೀರಾಮ ಸೇನೆ ಮುಖಂಡನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.
ಶ್ರೀರಾಮ ಸೇನೆ ಮುಖಂಡ ಶರಣಪ್ಪ ಮತ್ತು ಅವರ ಅವರ ಮನೆಯಲ್ಲಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಗಾಗಿ ಜೇವರ್ಗಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಂಬಂಧ ನಡೆದ ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 17ರಂದು  ಸಮುದಾಯವೊಂದರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರ ವಿರುದ್ಧ ನಾಗರಾಜ್ ಎಂಬುವರು ದೂರು ದಾಖಲಿಸಿದ್ದರು.
ಶ್ರೀರಾಮ ಸೇನೆ ಹುಲಿ ಎಂಬ ಪೋಸ್ಟ್ ಹಾಕಿ ಟ್ಯಾಗ್ ಮಾಡಲಾಗಿತ್ತು. ಈ ಪೋಸ್ಟ್ ನೋಡಿದ ನಂತರ ಸುಮಾರು 2 ಸಾವಿರ ಮಂದಿ ಜೇವರ್ಗಿಯಲ್ಲಿ ಪ್ರತಿಭಟನೆ ನಡೆಸಿದರು. ಶುಕ್ರವಾರ ಸಂಜೆ ನಗರದಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿತ್ತು.
ಶನಿವಾರ ಶರಣಪ್ಪ ಮನೆಗೆ ನುಗ್ಗಿದ ಕೆಲವು ದುಷ್ಕರ್ಮಿಗಳು  ಮನೆಯಲ್ಲಿದ್ದ ಹೆಣ್ಣುಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಯಳ ಬಹುದೆಂಬ ಹಿನ್ನೆಲೆಯಲ್ಲಿ ಯಾರನ್ನೂ ಪೊಲೀಸರು ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com