ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ನ್ಯಾಯಮೂರ್ತಿ ಶೆಟ್ಟಿ ಸರ್ಕಾರಕ್ಕೆ ಶಿಫಾರಸು

ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ...
ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ತಮ್ಮ ಪತ್ನಿಯೊಂದಿಗೆ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿಕೊಂಡ ಸಂದರ್ಭ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ತಮ್ಮ ಪತ್ನಿಯೊಂದಿಗೆ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿಕೊಂಡ ಸಂದರ್ಭ.
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಶಿಫಾರಸು ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 
ಕೇಸುಗಳನ್ನು ವಿಚಾರಣೆ ನಡೆಸಲು ಸಾಧ್ಯವಾಗದಿದ್ದ ಸಂದರ್ಭದಲ್ಲಿ ಅದನ್ನು ಉಪ ಲೋಕಾಯುಕ್ತಕ್ಕೆ ವರ್ಗಾಯಿಸುವ ಅಧಿಕಾರವನ್ನು ನೀಡುವಂತೆ ಅಧಿಸೂಚನೆ ಹೊರಡಿಸಲು ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 7ಕ್ಕೆ ತಿದ್ದುಪಡಿ ತರುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಶಿಫಾರಸು ಮಾಡಿದ್ದಾರೆ.
ಪ್ರಭಾವಿ ವ್ಯಕ್ತಿಗಳಿಗೆ ಸಂಬಂಧಪಟ್ಟ ಕೇಸುಗಳನ್ನು ಈಗಾಗಲೇ ಅವರ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿರುವುದರಿಂದ ಲೋಕಾಯುಕ್ತ ನ್ಯಾಯಮೂರ್ತಿಗಳು ಹೇಗೆ ನಿಭಾಯಿಸುತ್ತಾರೆ ಎಂಬ ಕುರಿತು ಸಮಾಜದ ಕೆಲವು ವರ್ಗದ ಜನರಲ್ಲಿ ಸಂದೇಹಗಳು ಉಂಟಾಗಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಶೆಟ್ಟಿ ಈ ಶಿಫಾರಸು ಮಾಡಿದ್ದಾರೆ.
ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದರೆ ನಿರ್ದಿಷ್ಟ ಕೇಸುಗಳನ್ನು ವಿಚಾರಣೆ ನಡೆಸಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಕಂಡುಬಂದಲ್ಲಿ, ಕೇಸುಗಳನ್ನು ಉಪ ಲೋಕಾಯುಕ್ತರಿಗೆ ವರ್ಗಾಯಿಸಲು ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. 
ಸುಪ್ರೀಂ ಕೋರ್ಟ್ ನಲ್ಲಿ ಕೆಲವು ವ್ಯಕ್ತಿಗಳ ಪರ ಈಗಾಗಲೇ ವಾದ ಮಂಡಿಸಿರುವುದರಿಂದ ಇದೀಗ ಅಂತವರ ವಿಚಾರಣೆ ನಡೆಸಲು ತಮ್ಮಿಂದ ಸಾಧ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸರ್ಕಾರಕ್ಕೆ ತಿಳಿಸಿದ್ದಾರೆ. ಸರ್ಕಾರ ಇದಕ್ಕೆ ಸೂಕ್ತ ರೀತಿಯಿಂದ ಸ್ಪಂದಿಸಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com