ಹೊಸ ಕೊಳವೆ ಬಾವಿ ಕೊರೆಯಲು ಅನುಮತಿ: ಸರ್ಕಾರಿ ಸಂಸ್ಥೆ ಮತ್ತು ಗಣಿ ಇಲಾಖೆ ನಡುವೆ ತಿಕ್ಕಾಟ

ಹೊಸ ಕೊಳವೆ ಬಾವಿ ಕೊರೆಸಲು ಅನುಮತಿ ನೀಡುವುದಿಲ್ಲ ಎಂದು ಗಣಿ ಮಚ್ಚು ಭೂವಿಜ್ಞಾನ ಇಲಾಖೆ ವಾದ, ಸರ್ಕಾರದ ವಿವಿಧ ಯೋಜನೆಗಳಡಿ ನಾವು ಹೆಚ್ಚುವರಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 'ಹೊಸ ಕೊಳವೆ ಬಾವಿ ಕೊರೆಸಲು ಅನುಮತಿ ನೀಡುವುದಿಲ್ಲ ಎಂದು ಗಣಿ ಮಚ್ಚು ಭೂವಿಜ್ಞಾನ ಇಲಾಖೆ ವಾದ, ಸರ್ಕಾರದ ವಿವಿಧ ಯೋಜನೆಗಳಡಿ ನಾವು ಹೆಚ್ಚುವರಿ ಕೊಳವೆ ಬಾವಿ ಕೊರೆಸಲೇ ಬೇಕು, ಇದು ರಾಜ್ಯ ಸರ್ಕಾರಿ ಸಂಸ್ಥೆಗಳ ಪ್ರತಿವಾದ'.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ತೀರ ತಳಮಟ್ಟ ತಲುಪಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಆದರೆ ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳಡಿ ಹೊಸ ಬೋರ್ ವೆಲ್ ಕೊರೆಸುವ ಯೋಜನಗೆಳನ್ನು ಘೋಷಣೆ ಮಾಡುತ್ತಿದೆ.

ಕರ್ನಾಟಕ ಕುಡಿಯುವ ನೀರಿನ ಮೂಲಗಳ ರಕ್ಷಣೆ ಕಾಯಿದೆ ಪ್ರಕಾರ ಇಲಾಖೆಗಳು ಹೆಚ್ಚು ಹೆಚ್ಚು ಬೋರ್ ವೆಲ್ ಕೊರೆಸಲು ಅನುಮತಿ ನೀಡುವಂತಿಲ್ಲ, ಗಂಗಾ ಕಲ್ಯಾಣ ಯೋಜನೆಯಡಿ 60 ಸಾವಿರದಿಂದ 70 ಸಾವಿರ ಕೊಳವೆ ಬಾವಿ ಕೊರೆಸಲು ಮಾತ್ರ ಅವಕಾಶವಿದೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಾಲ್ಮಿಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ಮಂಡಳಿ ಹಾಗೂ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಗಳು ಕೂಡ ವಿವಿಧ ಯೋಜನೆಗಳಡಿ ಹೊಸ ಬೋರ್ ವೆಲ್ ಕೊರೆಸಲು ಅನುಮತಿ ಕೇಳುತ್ತಿವೆ. ಎಲ್ಲಿ ನೀರಿನ ಅಭಾವವಿದೆಯೋ ಅಲ್ಲಿ ಕೊಳವೆ ಬಾವಿ ಕೊರೆಸಲು  ಹಲವು ಸರ್ಕಾರಿ ಸಂಸ್ಥೆಗಳಿಗೆ ಅನುಮತಿ ದೊರೆಯುತ್ತಿವೆ.

ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ರಾಜಕಾರಣಿಗಳು ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಬಜೆಟ್ ನಲ್ಲಿ ಘೋಷಣೆ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚೆಚ್ಚು ಪ್ರಮಾಣದಲ್ಲಿ ಬೋರ್ ವೆಲ್ ಕೊರೆಸುವುದಷ್ಟೇ ಪ್ರಮುಖ ವಿಷಯವಾಗಿದೆ, ಅದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅವರಿಗೆ ಚಿಂತೆಯೇ ಇಲ್ಲ, ಹೆಚ್ಚೆಚ್ಚು ಆಳಕ್ಕೆ ಬೋರ್ ವೆಲ್ ಕೊರೆದಂತೆ ಭೂಮಿಯ ಒಳಗಿರುವ ಕೆಟ್ಟ ರಸಾಯನಿಕಗಳು ನೀರಿನ ಜೊತೆ ಸೇರಿಕೊಳ್ಳುತ್ತವೆ. ಪ್ರತಿ ವರ್ಷ ಕೊರೆಸುತ್ತಿರುವ ಬೋರ್ ವೆಲ್ ಗಳ ಪ್ರಮಾಣದಲ್ಲ ಏರಿಕೆಯಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com