ಯಾದಗಿರಿ ಬಳಿ ಭೀಕರ ಅಪಘಾತ, 8 ಮಂದಿ ಸಾವು, 20 ಮಂದಿಗೆ ಗಾಯ

ಸಿಮೆಂಟ್ ಟ್ಯಾಂಕರ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಯಾದಗಿರಿ: ಸಿಮೆಂಟ್ ಟ್ಯಾಂಕರ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿ ಸಮೀಪದ ರಾಮಸಮುದ್ರ ಬಳಿ ಸೋಮವಾರ ಸಂಜೆ ನಡೆದಿದೆ.
ಇಂದು ಸಂಜೆ ಹೈದರಾಬಾದ್ ನಿಂದ ಕಲಬುರ್ಗಿ ಜಿಲ್ಲೆಯ ವಾಡಿಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಟ್ಯಾಂಕರ್ ವೊಂದು ಶಹಾಪುರದಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಡಣಾಪುರಕ್ಕೆ ವಾಪಸ್ ಆಗುತ್ತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಗಾಯಾಳುಗಳನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಸಂಬಂಧಿ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com