ಬೆಂಗಳೂರಿನಲ್ಲಿ ಹೊತ್ತಿ ಉರಿದ ಕೆಎಸ್ಆರ್ ಟಿಸಿ ಬಸ್, ಮಹಿಳೆ ಸಜೀವ ದಹನ

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು,...
ಬೆಂಕಿ ಹೊತ್ತಿಕೊಂಡ ಬಸ್
ಬೆಂಕಿ ಹೊತ್ತಿಕೊಂಡ ಬಸ್
ಬೆಂಗಳೂರು: ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 58 ವರ್ಷದ ಮಹಿಳೆಯೊಬ್ಬರು ಸಜೀವ ದಹನಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿನ್ನೆ ರಾತ್ರಿ 12.30ರ ಸುಮಾರಿಗೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅರಿಶಿನಕುಂಟೆ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್‌ ಅನ್ನು ನಿಲ್ಲಿಸಿದರೂ, ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿಯಲು ಸಾಧ್ಯವಾಗಲಿಲ್ಲ.
ಬಸ್‌ನಲ್ಲಿದ್ದ 26 ಮಂದಿ ಪ್ರಯಾಣಿಕರ ಪೈಕಿ ಭಾಗ್ಯಮ್ಮ ಎಂಬಾಕೆ ಸಜೀವ ದಹನವಾಗಿದ್ದು, ಒಂಬತ್ತು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಗಂಭೀರ ಗಾಯಗೊಂಡಿರುವವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದೆ.
ಘಟನೆಗೆ ಏನು ಕಾರಣ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಈ ಸಂಬಂಧ ನೆಲಮಂಗಲ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇನ್ನು ರಾಜ್ಯ ಸರ್ಕಾರ ಮೃತ ಮಹಿಳೆಯ ಕುಟುಂಬಕ್ಕೆ ಮೂರು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com