ಮಹಾಶಿವರಾತ್ರಿಗೆ ಕೆಎಸ್ ಆರ್ ಟಿಸಿಯಿಂದ ಹೆಚ್ಚುವರಿ 450 ಬಸ್

ಮಹಾಶಿವರಾತ್ರಿ ಅಂಗವಾಗಿ ಫೆಬ್ರವರಿ 23 ರಿಂದ 26 ರವರೆಗೆ ಕೆಎಸ್‌ಆರ್‌ಟಿಸಿ ನಗರದಿಂದ 450 ಹೆಚ್ಚುವರಿ ಬಸ್‌ಗಳ ...
ಕೆಸ್ ಆರ್ಟಿಸಿ ಬಸ್
ಕೆಸ್ ಆರ್ಟಿಸಿ ಬಸ್

ಬೆಂಗಳೂರು: ಮಹಾಶಿವರಾತ್ರಿ ಅಂಗವಾಗಿ ಫೆಬ್ರವರಿ 23 ರಿಂದ 26 ರವರೆಗೆ ಕೆಎಸ್‌ಆರ್‌ಟಿಸಿ ನಗರದಿಂದ 450 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಿದೆ.  

ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ಪಾವಗಡ, ಹೊಸದುರ್ಗಕ್ಕೆ ಈ ಬಸ್‌ಗಳು ಸಂಚರಿಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಸಂಚಾರ ಮಾಡಲಿವೆ.

ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ವಿಶೇಷ ಬಸ್‌ಗಳ  ಕಾರ್ಯಾಚರಣೆ ಇರಲಿವೆ.

ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ ಸೇರಿದಂತೆ ವಿವಿಧ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಹಲವು ಬಸ್ ನಿಲ್ದಾಣಗಳಲ್ಲಿ ಬುಕ್ಕಿಂಗ್ ಕೂಡ ಅವಕಾಶ ಕಲ್ಪಿಸಲಾಗಿದೆ. ಹೊರ ರಾಜ್ಯಗಳಿಗೂ ಅನ್ ಲೈನ್ ಟಿಕೆಟ್ ಬುಕ್ ಮಾಡಬಹುದಾಗಿತೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com