ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ: ಹಿರಿಯ ಅಧಿಕಾರಿಗಳಿಂದ ತನಿಖೆ

ಬಂಡೀಪುರ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನು ನಡೆಸಲಾಗುವುದು ಎಂದು ಅರಣ್ಯ ಸಚಿವ ಮಾನಥ ರೈ ಅವರು ಮಂಗಳವಾರ ಹೇಳಿದ್ದಾರೆ...
ಗಾಯಾಳು ಅರಣ್ಯ ಸಿಬ್ಬಂದಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅರಣ್ಯ ಸಚಿವ ರಾಮನಾಥ ರೈ
ಗಾಯಾಳು ಅರಣ್ಯ ಸಿಬ್ಬಂದಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅರಣ್ಯ ಸಚಿವ ರಾಮನಾಥ ರೈ

ಮೈಸೂರು: ಬಂಡೀಪುರ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನು ನಡೆಸಲಾಗುವುದು ಎಂದು ಅರಣ್ಯ ಸಚಿವ ಮಾನಥ ರೈ ಅವರು ಮಂಗಳವಾರ ಹೇಳಿದ್ದಾರೆ.

ಕಾಡ್ಗಿಚ್ಚಿನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರಣ್ಯ ಸಿಬ್ಬಂದಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಬಂಡೀಪುರ ನಾಗರಹೊಳೆ ಕಾಡ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಕಾಣದ ಕೈಗಳ ಕೈವಾಡವಿರುವ ಶಂಕೆಗಳು ಮೂಡಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೇಸಿಗಿ ಹಿನ್ನಲೆಯಲ್ಲಿ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಲಿಯಿರುವ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ. ಅರಣ್ಯ ಸಿಬ್ಬಂದಿಗಳಿಗೆ ಆಧುನಿಕ ಸಲಕರಣೆಗಳನ್ನು ನೀಡಲಾಗುತ್ತದೆ. ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಾಗ ಯುರೋಪ್ ದೇಶದಲ್ಲಿ ವಿಮಾನಗಳನ್ನು ಬಳಕಿ ಬೆಂಕಿ ನಂದಿಸುವ ಕಾರ್ಯಾಚರಣೆನ್ನು ಮಾಡಲಾಗುತ್ತದೆ. ಆದರೆ, ಯುರೋಪ್ ಗೆ ಭಾರತವನ್ನು ಹೋಲಿಕೆ ಮಾಡಬಾರದು. ನಮ್ಮ ನಿಯಂತ್ರಣದಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಹಾಗೂ ಕಾರ್ಯಾಚರಣೆಗಳನ್ನು ನಾವು ಮಾಡುತ್ತೇವೆ. ಸಾಂಪ್ರದಾಯಿಕ ವಿಧಾನಗಳನ್ನು ಪಾಲಿಸುವ ಮೂಲಕ ಅರಣ್ಯಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವಲ್ಲಿ ನಾವು ಯಶ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾಡ್ಗಿಚ್ಚಿಗೆ ಸಿಲುಕಿ ಮೃತಪಟ್ಟ ಅರಣ್ಯ ಸಿಬ್ಬಂದಿ ಮುರಗಪ್ಪ ಕುಟುಂಬಕ್ಕೆ ರೂ.25 ಲಕ್ಷ ಹಣವನ್ನು ಪರಿಹಾರವಾಗಿ ಘೋಷಣೆ ಮಾಡಿದ್ದಾರೆ.

ನಂತರ ಮಾತನಾಡಿದ ಜಿಲ್ಲಾ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಕಾಡ್ಗಿಚ್ಚಿನಲ್ಲಿ ಗಾಯಗೊಂಡ ಗಾಯಾಳು ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com