ಕಪ್ಪತಗುಡ್ಡ: ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಕಪ್ಪತಗುಡ್ಡ ಅರಣ್ಯ ಪ್ರದೇಶಕ್ಕೆ ಮತ್ತೆ ಸಂರಕ್ಷಿತ ಅರಣ್ಯದ ಸ್ಥಾನಮಾನ ನೀಡುವ ಸರ್ಕಾರದ ಅಧಿಸೂಚನೆಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಕಪ್ಪತಗುಡ್ಡ ಹೋರಾಟಗಾರರಿಗೆ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ಕಪ್ಪತಗುಡ್ಡ ಅರಣ್ಯ ಪ್ರದೇಶಕ್ಕೆ ಮತ್ತೆ ಸಂರಕ್ಷಿತ ಅರಣ್ಯದ ಸ್ಥಾನಮಾನ ನೀಡುವ ಸರ್ಕಾರದ ಅಧಿಸೂಚನೆಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಕಪ್ಪತಗುಡ್ಡ ಹೋರಾಟಗಾರರಿಗೆ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ. 
ಗದಗ ಜಿಲ್ಲೆಯಿಂದ ವೆಂಕಟೇಶ್ ದಾಸರ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ ಸಂರಕ್ಷಿತ ಅರಣ್ಯದ ಸ್ಥಾನಮಾನ ನೀಡುವ ಸಂಬಂಧ ‘ಕಳೆದ ತಿಂಗಳ 16ರಂದು ನಡೆದ ಸಾರ್ವಜನಿಕ ಸಮಾಲೋಚನಾ ಸಭೆಯ ನಿರ್ಧಾರವನ್ನು ಆಧರಿಸಿ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳಬಾರದು’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಅರಣ್ಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಕಪ್ಪತಗುಡ್ಡ ಅರಣ್ಯ ಪ್ರದೇಶಕ್ಕೆ ಮತ್ತೆ ಸಂರಕ್ಷಿತ ಅರಣ್ಯ ಎಂದು ಘೋಷಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com