ಯಲಹಂಕದ ಸರ್ಕಾರಿ ಶಾಲೆಯಲ್ಲಿ ಸಹಪಾಠಿಯಿಂದಲೇ 10ನೇ ತರಗತಿ ವಿದ್ಯಾರ್ಥಿ ಹತ್ಯೆ

ಶಾಲಾ ವಾರ್ಷಿಕೋತ್ಸವ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ 10ನೇ ತರಗತಿಯ ಓರ್ವ ವಿದ್ಯಾರ್ಥಿ ಸಹಪಾಠಿಗಳಿಂದಲೇ ಹತ್ಯೆಯಾಗಿರುವ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಶಾಲಾ ವಾರ್ಷಿಕೋತ್ಸವ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ 10ನೇ ತರಗತಿಯ ಓರ್ವ ವಿದ್ಯಾರ್ಥಿ ಸಹಪಾಠಿಗಳಿಂದಲೇ ಹತ್ಯೆಯಾಗಿರುವ ಘಟನೆ ಯಲಹಂಕದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದಿದೆ.
ಇಂದು ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗುಂಪು ಘರ್ಷಣೆ ಸಂಭವಿಸಿದ್ದು, ಓರ್ವ ವಿದ್ಯಾರ್ಥಿ ಇರಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ. ಹತ್ಯೆಯಾದ ವಿದ್ಯಾರ್ಥಿ ಹರ್ಷ(15) ಎಂದು ಗುರುತಿಸಲಾಗಿದೆ.
ಕಾರ್ಯಕ್ರಮದಲ್ಲಿ ಕುಳಿತುಕೊಳ್ಳುವ ಜಾಗದ ವಿಷಯವಾಗಿ ಗಲಾಟೆ ನಡೆದಿದ್ದು,  ಈ ವೇಳೆ ಆಕಾಶ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಹರ್ಷನಿಗೆ ಇರಿದಿದ್ದಾನೆ. 
ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com