ಆನೆ ಕಾಟ ತಪ್ಪಿಸುವಂತೆ ಮೋದಿಗೆ ಮಂಗಳೂರು ಬಾಲಕಿ ಪತ್ರ: ದೂರಿಗೆ ಸ್ಪಂದಿಸಿದ ಪಿಎಂಒ

ಮಂಗಳೂರಿನ 10 ವರ್ಷದ ಬಾಲಕಿ ಬರೆದಿದ್ದ ಪತ್ರಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯ ಸ್ಪಂದಿಸಿದೆ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರಿನ 10 ವರ್ಷದ ಬಾಲಕಿ ಬರೆದಿದ್ದ ಪತ್ರಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯ ಸ್ಪಂದಿಸಿದೆ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಮಂಗಳೂರಿನ ಮಂಡೆಕೋಲು ಗ್ರಾಮದ ನಿಖಿತಾ ಈಶ್ವರಮಂಗಲಮ್ ನ ಗಜಾನನ ಆಂಗ್ಳ ಶಾಲೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

ಆಕೆಯ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಆನೆಗಳ ಹಾವಳಿಯಿಂದಾಗಿ ಸರಿಯಾಗಿ ಸ್ಕೂಲಿಗೆ ಹಾಜರಾಗಲು ಸಾಧ್ಯವಾಗುತ್ತಿರಲಿಲ್ಲ ಈ ಹಿನ್ನೆಲೆಯಲ್ಲಿ ನಿಖಿತಾ ಅಕ್ಟೋಬರ್ 11 2016 ರಂದು ಪ್ರಧಾನ ಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಳು. ಅಕ್ಟೋಬರ್ 21 ಕ್ಕೆ ಪಿಎಂಒ ಕಚೇರಿಯಿಂದ ಪ್ರತಿಕ್ರಿಯೆ ಬಂದಿತ್ತು. ಆನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.

ಅದರಂತೆ ಮಂಡೆಕೋಲು ಗ್ರಾಮಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಸ್ಥಿತಿ ಅವಲೋಕಿಸಿ, ಅವರ ಹಿರಿಯ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆನೆ ಕಾಟ ತಪ್ಪಿಸಲು ಏನು ಕ್ರಮ ಕೈಗೊಳ್ಳಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com