ಹುಬ್ಬಳ್ಳಿ, ಚಿತ್ರದುರ್ಗ, ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ!

ಫೆ.28 ರಂದು ಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬೆಳಗಾವಿ, ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಬೆಳಗಾವಿ: ಫೆ.28 ರಂದು ಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬೆಳಗಾವಿ, ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.  
ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಉಪತಹಶೀಲ್ದಾರ್ ಸಲೀಂ ಸಾಬುಸಾಬ್ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. 
ಚಿತ್ರದುರ್ಗದಲ್ಲೂ ಅಕ್ರಮ ಸಂಪಾದನೆ ಮಾಡಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಶಿವಮೊಗ್ಗ ಮೂಲದ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಕರುಣಾಕರ್ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕರುಣಾಕರ್ ಶಿವಮೊಗ್ಗ ಮೂಲದವರಾಗಿದ್ದು, ಶಿವಮೊಗ್ಗದಲ್ಲಿರುವ ನಿವಾಸದ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ಇನ್ನು ಹುಬ್ಬಳ್ಳಿಯಲ್ಲೂ ಅಕ್ರಮ ಸಂಪಾದನೆ ಮಾಡಿರುವ ಅಧಿಕಾರಿಗಳಿಗೆ ಎಸಿಬಿ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ವಿಶ್ವೇಶ್ವರ ನಗರದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿ, ಮಹತ್ವದ ದಾಖಲೆಗಳಾನ್ನು ವಶಪಡಿಸಿಕೊಂಡಿರುವುದರ ಬಗ್ಗೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com