ಅನುದಾನ ರಹಿತ ಶಾಲೆಗಳಲ್ಲಿ ಆರ್‌ಟಿಇ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸಚಿವ ಸಂಪುಟ ಸಮ್ಮತಿ

ಆರ್ ಟಿಇ ಕಾಯ್ದೆಯಡಿ ಅನುದಾನ ರಹಿತ ಶಾಲೆಗಳಿಗೆ ದಾಖಲಾಗುವ ಮಕ್ಕಳ ಶಿಕ್ಷಣ ಶುಲ್ಕವನ್ನು ಹೆಚ್ಚಳ ಮಾಡುವ ಪ್ರಸ್ತಾವಕ್ಕೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಆರ್ ಟಿಇ ಕಾಯ್ದೆಯಡಿ ಅನುದಾನ ರಹಿತ ಶಾಲೆಗಳಿಗೆ ದಾಖಲಾಗುವ ಮಕ್ಕಳ ಶಿಕ್ಷಣ ಶುಲ್ಕವನ್ನು ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಸಮ್ಮತಿ ನೀಡಿದೆ. 
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನ‌ಡೆದ ಸಚಿವ ಸಂಪುಟ ಸಭೆಯಲ್ಲಿ ಆರ್‌ಟಿಇ ಅ‌ಡಿಯಲ್ಲಿ ಖಾಸಗಿ ಶಾಲೆಗಳ ಪ್ರಾಥಮಿಕ ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳ ಶುಲ್ಕವನ್ನು 11,848 ರುಪಾಯಿಯಿಂದ 16,000 ರುಪಾಯಿಗೆ ಏರಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು ಆರ್‌ಟಿಇ ಅ‌ಡಿ ಪೂರ್ವ ಪ್ರಾಥಮಿಕ ಶಾಲೆ(ಪ್ರೀ ನರ್ಸರಿ ತರಗತಿಗಳಿಗೆ) ದಾಖಲಾಗುವ ಮಗುವಿನ ಶುಲ್ಕವನ್ನು 5924 ರುಪಾಯಿಯಿಂದ 8,000 ರುಪಾಯಿಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, 2017-18ನೇ ಶೈಕ್ಷಣಿಕ ವರ್ಷದಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಆರ್‌ಟಿಇ ಕಾಯ್ದೆಯಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲೂ ಶಾಲಾ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳನ್ನು ನಿರ್ಧಿಷ್ಟ ಮಾರಾಟಗಾರರಿಂದ ಅಥವಾ ಶಾಲೆಯಿಂದಲೇ ಅವುಗಳನ್ನು ಪಡೆಯಬೇಕು ಎಂದು ಸೂಚಿಸುವಂತಿಲ್ಲ. ಈ ರೀತಿ ಮಾಡಿದರೆ ಕ್ರಮ ಕೈಗೊಳ್ಳಲು ಸಚಿವ ಸಂಪುಟ ತೀರ್ಮಾನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com