
ಸಿರ್ಸಿ: ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಹೆಗ್ಡೆಯವರ ತಾಯಿಯನ್ನು ಸಿರ್ಸಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.
ಅನಂತ್ ಕುಮಾರ್ ಅವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಕಷ್ಟು ಸುದ್ದಿ ಮಾಡುತ್ತಿದೆ. ಸಿಸಿಟಿವಿ ದೃಶ್ಯಾವಳಿ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ದೃಶ್ಯದಲ್ಲಿ ಹೆಗ್ಡೆಯವರು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ಕಂಡು ಬಂದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಮಧುಕೇಶ್ವರ ಜೀವಿ, ಡಾ. ಬಾಲಚಂದ್ರ ಮತ್ತು ಡಾ.ರಾಹುಲ್ ಮರ್ಶಾಕರ್ ಅವರ ಮೇಲೆ ಹೆಗ್ಡೆಯವರು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಘಟನೆ ಕುರಿತಂತೆ ಈ ವರೆಗೂ ಅಧಿಕೃತವಾಗಿ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
Advertisement