
ನವದೆಹಲಿ/ ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಘಟನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್ ಜಾರಿಗೊಳಿಸಿದೆ.
ಪರಮೇಶ್ವರ್ ಮತ್ತು ಅಜ್ಮಿ ನೀಡಿದ ಹೇಳಿಕೆ ಆಧರಿಸಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ತಿಳಿಸಿದರು. ದೇಶದಲ್ಲಿರುವ ಎಲ್ಲಾ ಪುರುಷರು ಇದೇ ರೀತಿಯಿಲ್ಲ, ಶೇ, 25 ರಷ್ಟು ಪುರುಷರು ದೇಶದ ಮಹಿಳೆಯರಿಗೆ ಗೌರವ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸುವುದರಿಂದ ಇಂಥ ಘಟನೆಗಳು ನಡೆಯುತ್ತವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ಖಂಡಿಸಿರುವ ಕುಮಾರ ಮಂಗಲಂ , ಕೂಡಲೇ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಹಿಳೆಯರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಘಟನೆಯಲ್ಲಿ ಪಾಲ್ಗೋಂಡ ಆರೋಪಿಗಳ ವಿರುದ್ಧ ಯಾವ ರೀತಿಯ ಶಿಸ್ತು ಕ್ರಮ ಜರುಗಿಸಿದ್ದೀರಾ ಎಂಬುದರ ಬಗ್ಗೆ ಲಿಖಿತ ಮಾಹಿತಿ ನೀಡುವಂತೆ ಐಜಿ, ಡಿಜಿ, ನಗರ ಪೊಲೀಸ್ ಆಯುಕ್ತ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
Advertisement