ಸಿಸಿಟಿವಿ ದೃಶ್ಯಗಳಲ್ಲಿ ಸ್ಪಷ್ಟ ಸಾಕ್ಷ್ಯದ್ದೇ ಕೊರತೆ: ಬೆಂಗಳೂರು ಪೊಲೀಸ್

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂಜಿ ರಸ್ತೆಯಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಯ ಬಗ್ಗೆ ಮತ್ತಷ್ಟು ನಿಖರ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಿದ್ದಾರೆ.
ಟ್ವಿಟರ್ ಬಳಕೆದಾರರ ಪ್ರಶ್ನೆಗಳಿಗೆ ಉತ್ತರಿಸಿದ ಪೊಲೀಸ್ ಆಯುಕ್ತ ಪ್ರವೀಣ್ ಸೂದ್
ಟ್ವಿಟರ್ ಬಳಕೆದಾರರ ಪ್ರಶ್ನೆಗಳಿಗೆ ಉತ್ತರಿಸಿದ ಪೊಲೀಸ್ ಆಯುಕ್ತ ಪ್ರವೀಣ್ ಸೂದ್

ಬೆಂಗಳೂರು:  ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂಜಿ ರಸ್ತೆಯಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದ್ದು ಪೊಲೀಸರು ಘಟನೆಗಳ ಬಗ್ಗೆ ಮತ್ತಷ್ಟು ನಿಖರ ಸಾಕ್ಷ್ಯಾಧಾರಗಳು ಸಿಗಬೇಕೆಂದು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಜನರು ಬ್ಲರ್ ಆಗಿರುವ ಚಿತ್ರಗಳನ್ನು ಟ್ವಿಟರ್ ನಲ್ಲಿ ಅಪ್ ಡೇಟ್ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಚಿತ್ರಗಳ ಮೂಲ ಫುಟೇಜ್ ನಮ್ಮ ಬಳಿಯೂ ಇದೆ. ಆದರೆ ಅದನ್ನು ಯಥಾವತ್ ವೀಕ್ಷಿಸಿದರೆ ಅದರಲ್ಲಿ ಮಾಧ್ಯಮಗಳು ಹೇಳುವುದಕ್ಕಿಂತ ಭಿನ್ನವಾದ ಅಂಶಗಳಿವೆ. ಆದರೆ ಮಾಧ್ಯಮಗಳೇಕೆ ಬ್ಲರ್ ಮಾಡುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿರುವುದು ಸ್ಪಷ್ಟವಾಗಿರುವುದಕ್ಕೆ ನಿಖರವಾದ ಸಾಕ್ಷ್ಯಗಳ ಕೊರತೆ ಇದೆ. ಸ್ಪಷ್ಟ ಸಾಕ್ಷ್ಯ ಸಿಗುವವರೆಗೂ ನಾವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಳ್ಳುವುದಿಲ್ಲ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ನಿಗಾ ವಹಿಸಲು ಅಳವಡಿಸಲಾಗಿದ್ದ 46 ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳು ಹಾಗೂ ಕಮರ್ಷಿಯಲ್ ಸಂಸ್ಥೆಗಳು ಅಳವಡಿಸಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ ಆದರೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಸ್ಪಷ್ಟ ಸಾಕ್ಷ್ಯಾಧಾರಗಳಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಹಲವು ತಂಡಗಳನ್ನು ರಚಿಸಲಾಗಿದ್ದು, ಪ್ರಕರಣದ ಬಗ್ಗೆ ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಹೇಳಿದ್ದಾರೆ. 
ಇನ್ನು ಪ್ರವೀಣ್ ಸೂದ್ ಟ್ವೀಟ್ ಮೂಲಕ ಸ್ಪಷ್ಟನೆಯೊಂದನ್ನು ನೀಡಿದ್ದು ಎಫ್ಐಆರ್ ದಾಖಲಿಸಿರುವುದು ಕಮ್ಮನಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲೇ ಹೊರತು ಎಂಜಿ ರಸ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com