ಬೆಂಗಳೂರು: ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣದ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಶುಕ್ರವಾರ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಬೆಳ್ಳಂಬೆಳಗ್ಗೆ ನಗರದ ಕೆ.ಜಿ.ಹಳ್ಳಿಯಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ನಡೆದಿದೆ.