ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ

ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.
ಆರೋಪಿಗಳಾದ ಲಿನೋ ಹಾಗೂ ಅಯ್ಯಪ್ಪ
ಆರೋಪಿಗಳಾದ ಲಿನೋ ಹಾಗೂ ಅಯ್ಯಪ್ಪ
Updated on: 

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.

ನಿನ್ನೆ ಬಂಧಿತರಾಗಿದ್ದ ಆರೋಪಿಗಳಾದ ಲಿನೋ, ಅಯ್ಯಪ್ಪ, ರಾಜು ಮತ್ತು ಚಿನ್ನು ಎಂಬ ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 4 ದಿನಗಳ ಕಾಲ ಪೊಲೀಸ್  ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ವಶಕ್ಕೆ ಪಡೆದಿರು ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.

ಪೊಲೀಸರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ ಸಂತ್ರಸ್ತ ಯುವತಿ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಂದು ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು  ತಿಳಿದುಬಂದಿದೆ. ಬಾಣಸವಾಡಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಯುವತಿ ಮನೆಗೆ ತೆರಳಿ ಹೇಳಿಕೆ ಪಡೆದಿದ್ದು, ಈ ವೇಳೆ ಯುವತಿ ಆ ಯುವಕರು ತನಗೆ ಪರಿಚಯವಿರಲ್ಲಿಲ್ಲ ಎಂದು ಹೇಳಿಕೊಂಡಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com