ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ವಜಾ!

ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
Published on

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದ್ದು, ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ  ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇದೇ ಜನವರಿ 18ಕ್ಕೆ ಸಂಘದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲ್ಲಿದ್ದು, ಅಲ್ಲಿಯವರೆಗೂ ಹಂಗಾಮಿ ಅಧ್ಯಕ್ಷರಾಗಿ ನಾರಾಯಣಮೂರ್ತಿಯವರನ್ನು ಆಯ್ಕೆ ಮಾಡಲಾಗಿದೆ. ನಿನ್ನೆ ನಗರದ ವಿವಿಪುರಂನಲ್ಲಿರುವ ಸಂಘದ  ಕಚೇರಿಯಲ್ಲಿ ಸಹಕಾರ ಇಲಾಖೆಯ ಉಪ ನಿಬಂಧಕ ಬಿ.ಬಸಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟ್ಟು 35 ಮಂದಿ ನಿರ್ದೇಶಕರಲ್ಲಿ 18 ಮಂದಿ ಅಪ್ಪಾಜಿಗೌಡರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಲಾಗಿದೆ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಒಕ್ಕಲಿಗರ ಸಂಘದ ನಿರ್ದೇಶಕರ ಪೈಕಿ ಅಪ್ಪಾಜಿಗೌಡರ ನಾಯಕತ್ವ ವಿರೋಧಿಸಿ 18 ಜನ ನಿರ್ದೇಶಕರು ಸಹಿ ಹಾಕಿ ಅವಿಶ್ವಾಸ ಮಂಡಿಸಿದ್ದರು. ಸಭೆ ಸಂದರ್ಭದಲ್ಲಿ ಅಧ್ಯಕ್ಷರು ಆಗಮಿಸಿದಾಗ ಅಪ್ಪಾಜಿಗೌಡರ ಪರ ಹಾಗೂ  ವಿರೋಧದ ಕಾರ್ಯಕರ್ತರ ನಡುವೆ ಪರಸ್ಪರ ವಾದ-ವಿವಾದ ನಡೆದಿತ್ತು. ಕಳೆದ ಹಲವು ದಿನಗಳಿಂದ ಅಪ್ಪಾಜಿಗೌಡರ ವಿರುದ್ಧ ನಿರ್ದೇಶಕರ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿಂದೆ ಕರೆದಿದ್ದ ಸರ್ವ ಸದಸ್ಯರ  ಸಭೆಯಲ್ಲಿ ಅವಿಶ್ವಾಸ ನಿರ್ಣಯ ತಂದಿತ್ತಾದರೂ ಅದರಲ್ಲಿ ಅಪ್ಪಾಜಿಗೌಡ ಗೆದ್ದಿದ್ದರು.

ಪದಚ್ಯುತಿ ನಿರ್ಧಾರವನ್ನು ವಿರೋಧಿಸಿದ ಅಪ್ಪಾಜಿಗೌಡ
ಇನ್ನು ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಪದತ್ಯುಚಗೊಳಿಸಿವ ನಿರ್ಧಾರವನ್ನು ವಿರೋಧಿಸಿರುವ ಪದಚ್ಯುತ ಅಧ್ಯಕ್ಷ ಅಪ್ಪಾಜಿಗೌಡ ಅವರು, ತಮ್ಮನ್ನು ಸ್ಥಾನದಿಂದ ಕೆಳಗಿಳಿಸುವ ಅಧಿಕಾರವೇ ಇಲ್ಲ. ಸಂಘದ ಕಾನೂನಿನ ಪ್ರಕಾರ  ಅಧ್ಯಕ್ಷರನ್ನು ಪದಚ್ಯುತಗೊಳಿಸಲು 2/3 ನಿರ್ದೇಶಕ, ಪದಾಧಿಕಾರಿಗಳ ನಿರ್ಣಯ ಅಗತ್ಯ. ಹೀಗಾಗಿ ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com