ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ವಾರ ಕಳೆದರೂ ಒಬ್ಬರನ್ನು ಬಂಧಿಸದ ಪೊಲೀಸರು

ಹೊಸ ವರ್ಷಾಚರಣೆ ವೇಳೆ ಎಂ.ಜಿ ರಸ್ತೆಯಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು 20 ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಎಂ.ಜಿ ರಸ್ತೆಯಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು 20 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ, ಘಟನೆ ನಡೆದು ವಾರ ಕಳೆದರೂ ಇದುವರೆಗೂ ಒಬ್ಬರನ್ನು ಬಂಧಿಸಿಲ್ಲ.

ಸುಮಾರು 100 ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಆದರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಒಬ್ಬರನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವೇರಿ ಎಂಪೋರಿಯಂ ಜಂಕ್ಷನ್ ನಲ್ಲಿ  ಹೊಸ ವರ್ಷಾಚರಣೆ ವೇಳೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ನಾವು ಸಂಗ್ರಹಿಸಿ ಪರಿಶೀಲನೆ ನಡೆಸಿದ್ದೇವೆ. ಅದರಲ್ಲಿ ಕಾಣಿಸಿಕೊಂಡ ವ್ಯಕ್ತಿಗಳನ್ನ ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ದೌರ್ಜನ್ಯದ ಬಗ್ಗೆ ಆರೋಪ ಮಾಡಿದ ಮಾಧ್ಯಮಗಳು ಸಂತ್ರಸ್ತರ ಸಂದರ್ಶನ ನಡೆಸಿವೆ, ಆದರೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ, ಈ ಘಟನೆ ಸಂಬಂಧ ಯಾರೋಬ್ಬರು ದೂರು ನೀಡು ಸಹ ಮುಂದೆ ಬರುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com