ಮಧ್ಯರಾತ್ರಿಯಿಂದ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ ಸ್ಥಗಿತ

ರಾಜ್ಯಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಸ್ವೀಕರಿಸದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ.

ಕ್ಯಾಶ್ ಲೆಸ್ ವ್ಯವಹಾರಕ್ಕೆ ಸೆಡ್ಡು ಹೊಡೆದಿರುವ ಬಂಕ್ ಮಾಲೀಕರು ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಕೆಯನ್ನು ಸ್ಥಗಿತಗೊಳಿಸಲಿದ್ದಾರೆ. ಬ್ಯಾಂಕ್‍ಗಳು ಬಂಕ್ ಮಾಲೀಕರಿಗೆ ಶೇ.1 ರಷ್ಟು ಸರ್ವೀಸ್ ಟ್ಯಾಕ್ಸ್ ಹಾಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪೆಟ್ರೋಲ್ ಬಂಕ್‍ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್‍ಗಳನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಆರ್ ರವೀಂದ್ರನಾಥ್ ಹೇಳಿದ್ದಾರೆ.

ಜನವರಿ 9 ರಿಂದ ಅಂದರೆ ನಾಳೆ ಬೆಳಗ್ಗೆಯಿಂದ ಸರ್ವೀಸ್ ಟ್ಯಾಕ್ಸ್ ಹಾಕುವುದಾಗಿ ಹೇಳಲಾಗಿದೆ. ಹಾಗಾಗಿ ಇಂದು ಮಧ್ಯರಾತ್ರಿಯಿಂದಲೇ ಕಾರ್ಡ್‍ಗಳ ಬಳಕೆ ಇಲ್ಲ. ಪ್ರಧಾನಿ ಮೋದಿ ಕ್ಯಾಶ್‍ಲೆಸ್ ವ್ಯವಹಾರ ಮಾಡಿ ಅಂತಾ ಹೇಳ್ತಾರೆ. ಪೆಟ್ರೋಲ್ ಬಂಕ್‍ಗಳಲ್ಲಿ ಶೇ.90 ರಷ್ಟು ಕಾರ್ಡ್ ಬಳಕೆ ಮಾಡಲಾಗುತ್ತಿದೆ. ಇದರಿಂದ ಹೇಗೆ ವ್ಯವಹಾರ ಮಾಡೋದು ಅಂತ ರವೀಂದ್ರ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com