ಕೋಲಾರ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

24 ವರ್ಷದ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೋಲಾರ: 24 ವರ್ಷದ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ಕೋಲಾರದ ವೆಮ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ದೊಡ್ಡವಲ್ಲಭಿ ಪ್ರದೇಶದಲ್ಲಿ ಹೊಸವರ್ಷಾಚರಣೆಯ ದಿನದಂದು ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಲೈಂಗಿಕ ದೌರ್ಜನ್ಯವೆಸಗಿದ್ದಾರೆಂದು ತಿಳಿದುಬಂದಿದೆ.

ಸಂತ್ರಸ್ತ ಮಹಿಳೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಇದೀಗ ಪ್ರಕರಣವನ್ನು ವೆಮಗಲ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ವಿ ಗೋಪಿನಾಥ್ ಅವರು ಹೇಳಿದ್ದಾರೆ.

ತನ್ನ ಸಹೋದರ ರಸ್ತೆಯೊಂದರ ಬಳಿ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆಂದು ಸಂತ್ರಸ್ತ ಮಹಿಳೆಗೆ ವ್ಯಕ್ತಿಯೊಬ್ಬ ಹೇಳಿದ್ದಾನೆ. ಅಣ್ಣನನ್ನು ರಕ್ಷಣೆ ಮಾಡುವಂತೆ ನಾಟಕ ಮಾಡಿ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ. ಆತನ ಮಾತನ್ನು ನಂಬಿದ್ದ ಮಹಿಳೆ ಆತನೊಂದಿಗೆ ಕಾರಿನಲ್ಲಿ ಹೋಗಿದ್ದಾಳೆ. ಈ ವೇಳೆ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ತನ್ನ ಇಬ್ಬರು ಸ್ನೇಹಿತರೊಂದಿಗೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಆರೋಪಿ ಸಂತ್ರಸ್ತ ಮಹಿಳೆಗೆ ಗೊತ್ತಿರುವ ವ್ಯಕ್ತಿಯೇ ಆಗಿದ್ದಾನೆ. ಪ್ರಸ್ತುತ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ದಿವ್ಯಾ ವಿ. ಗೋಪಿನಾಥ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com