ಗೌರಿಶಂಕರ ಸ್ವಾಮಿ ವಿಧಿವಿಶ

ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಗೌರಿಶಂಕರ ಸ್ವಾಮೀಜಿ ಅವರು ಬುಧವಾರ ವಿಧಿವಶರಾಗಿದ್ದಾರೆ.
ಗೌರಿಶಂಕರ ಸ್ವಾಮಿ (ಸಂಗ್ರಹ ಚಿತ್ರ)
ಗೌರಿಶಂಕರ ಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು: ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಗೌರಿಶಂಕರ ಸ್ವಾಮೀಜಿ ಅವರು ಬುಧವಾರ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕಳೆದ ಹಲವು ದಿನಗಳಿಂದ ಪಾರ್ಶವಾಯುವಿನಿಂದ ಬಳಲುತ್ತಿದ್ದ ಗೌರಿಶಂಕರ ಸ್ವಾಮಿ ಅವರನ್ನು ಇತ್ತೀಚೆಗೆ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪಾರ್ಶವಾಯುವಿನಿಂದಾಗಿ ರಕ್ತ ಹೆಪ್ಪುಗಟ್ಟಿದ್ದರಿಂದ ಅವರಿಗೆ ಚಿಕಿತ್ಸೆ  ನೀಡಲಾಗುತ್ತಿತ್ತು. ಅಲ್ಲದೆ ಗೌರಿಶಂಕರ ಸ್ವಾಮಿ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಗೌರಿಶಂಕರ ಸ್ವಾಮಿ ವಿಧಿವಶರಾಗಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಳೆದ ಹಲವು ದಶಕಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ಶ್ರೀಗಳು ತುಮಕೂರಿನ ಗುಬ್ಬಿ ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಸಿದ್ಧಗಂಗಾ ಮಠ ಸ್ಥಾಪಿಸಿ ಅಲ್ಲಿಯೇ ವಾಸಿಸುತ್ತಿದ್ದರು. ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟದ ಕಾನೂನು ಹೋರಾಟ ಇನ್ನೂ ತುಮಕೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಗುರುಗಳನ್ನು ನೋಡುವ ಕೊನೆಯ ಆಸೆ ಫಲಿಸಲಿಲ್ಲ: ಶಿಷ್ಯರ ಅಳಲು

1987ರಲ್ಲಿ ಸಿದ್ದಗಂಗಾ ಮಠದಲ್ಲಿ ಸಲಿಂಕಾಮ ನಡೆಸಿದ ಆರೋಪದ ಮೇರೆಗೆ ಮಠದಿಂದ ಹೊರಹಾಕಲ್ಪಟ್ಟಿದ್ದ ಗೌರಿಶಂಕರ ಸ್ವಾಮಿ ಅವರು, ತಮ್ಮ ಗುರುಗಳಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯನ್ನು ನೋಡಲು  ಬಯಸಿದ್ದರು. ಈ ಹಿಂದೆ ಅವರನ್ನು ನೋಡಲು ನಡೆಸಿದ ಹಲವು ಪ್ರಯತ್ನಗಳು ವಿಫಲವಾಗಿತ್ತು. ಕನಿಷ್ಠ ಪಕ್ಷ ಅವರ ಕೊನೇ ಗಳಿಗೆಯಲ್ಲಾದರೂ ಶಿವಕುಮಾರ ಸ್ವಾಮೀಜಿಗಳು ಅವರನ್ನು ನೋಡಲು ಆಗಮಿಸುತ್ತಾರೆ ಎಂದು  ಭಾವಿಸಿದ್ದರು. ಆದರೆ ಅವರ ಕೊನೆಯ ಆಸೆಯೂ ಈಡೇರಲಿಲ್ಲ. ನಿನ್ನೆ ಊಟದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶಿವಕುಮಾರ ಸ್ವಾಮೀಜಿಗಳು ಒಂದು  ಮಾತು ಹೇಳಿದರೆ ಎಲ್ಲವನ್ನೂ ತ್ಯಜಿಸಿ ಬಿಡುತ್ತೇನೆ. ಅವರ ಆಶೀರ್ವಾದ ಒಂದು ಇದ್ದರೆ ಸಾಕು ಎಂದು ಹೇಳುತ್ತಿದ್ದರು ಎಂದು ಆಸ್ಪತ್ರೆಯಲ್ಲಿದ್ದ ಅವರ ಶಿಷ್ಯರು ಅಳಲು ತೋಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com