ವಿಶ್ವದ 10 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೊದಲ ಸ್ಥಾನ

ಸಿಲಿಕಾನ್ ಸಿಟಿ ಬೆಂಗಳೂರು ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಿಶ್ವದ 10 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಉದ್ಯಾನ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಿಶ್ವದ 10 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಉದ್ಯಾನ ನಗರಿ ಮೊದಲ ಸ್ಥಾನ ಪಡೆದುಕೊಂಡಿದೆ.
ಜೋನ್ಸ್ ಲ್ಯಾಂಗ್ ಲಾಸೆಲ್ಲೆ(ಜೆಎಲ್ಎಲ್) ರಿಯಲ್ ಎಸ್ಟೇಟ್ ಸಂಸ್ಥೆ ನಡೆಸಿದ ವಾರ್ಷಿಕ ಸಿಟಿ ಮೂಮೆಂಟಂ ಇಂಡೆಕ್ಸ್ ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೊದಲ ಸ್ಥಾನ ಪಡೆದರೆ, ವಿಯೇಟ್ನಾಂನ ಹೋ ಚಿ ಮಿನ್ನ್ ಸಿಟಿ, ಅಮೆರಿಕದ ಸಿಲಿಕಾನ್ ವ್ಯಾಲಿ ನಂತರದ ಸ್ಥಾನ ಹಾಗೂ ಹೈದರಾಬಾದ್ ಐದನೇ ಸ್ಥಾನ ಪಡೆದಿದೆ.
ಬೆಂಗಳೂರು ಹಾಗೂ ಹೈದರಾಬಾದ್ ಹೊರತುಪಡಿಸಿ ವಿಶ್ವದ 30 ಡೈನಮಿಕ್ ನಗರಗಳ ಪಟ್ಟಿಯಲ್ಲಿ ಭಾರತದ ಪುಣೆ(13ನೇ ಸ್ಥಾನ), ಚೆನ್ನೈ(17)ನೇ ಸ್ಥಾನ ಮುಂಬೈ(25ನೇ ಸ್ಥಾನ) ಹಾಗೂ ದೆಹಲಿ(23ನೇ ಸ್ಥಾನ) ಸ್ಥಾನ ಪಡೆದಿವೆ.
ಒಂದು ನಗರದ ಆರ್ಥಿಕ ನೆಲೆ ಮತ್ತು ವಾಣಿಜ್ಯ ಉದ್ದೇಶದ ರಿಯಲ್ ಎಸ್ಟೇಟ್ ಮಾರುಕಟ್ಟೆಯು ಬದಲಾಗುವ ವೇಗವನ್ನು ಆಧರಿಸಿ ಈ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯ ಪೂರ್ಣ ವರದಿಯನ್ನು ಜೆಎಲ್ಎಲ್ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ವರ್ಲ್ಡ್ ಎಕನಾಮಿಕ್ ಫೋರಂ ವೆಬ್ ಸೈಟ್ ವರದಿ ಮಾಡಿದೆ.
ಈ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಆರ್ಥಿಕ ಬೆಳವಣಿಗೆಯ ದರ, ನಗಕರೀಕರಣ ಮತ್ತು ಮೂಲಸೌಲಭ್ಯ ಸುಧಾರಣೆ ಕ್ಷೇತ್ರದಲ್ಲಿ ಅಗಾಧ ಹೂಡಿಕೆಯೇ ಕರ್ನಾಟಕ ರಾಜಧಾನಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲು ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com