ಸಾಕಷ್ಟು ನ್ಯಾಯಾಧೀಶರು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಹೊಂದಿದ್ದಾರೆ: ಸಿದ್ದರಾಮಯ್ಯ

ನ್ಯಾ.ವಿಶ್ವನಾಥ ಶೆಟ್ಟಿಯೊಬ್ಬರೇ ಅಲ್ಲ, ಸಾಕಷ್ಟು ನ್ಯಾಯಾಧೀಶರೂ ಕೂಡ ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಹೊಂದಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನ್ಯಾ.ವಿಶ್ವನಾಥ ಶೆಟ್ಟಿಯೊಬ್ಬರೇ ಅಲ್ಲ, ಸಾಕಷ್ಟು ನ್ಯಾಯಾಧೀಶರೂ ಕೂಡ ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಹೊಂದಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಲೋಕಾಯುಕ್ತ ಹುದ್ದೆಗೆ ನ್ಯಾ.ವಿಶ್ವನಾಥ ಶೆಟ್ಟಿಯವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಆದರೆ, ಇದನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ಹಿನ್ನಲೆಯಲ್ಲಿ ನಿನ್ನೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರತೀ ಬಾರಿ ಇದೇ ರೀತಿಯ ಆಗುತ್ತಲೇ ಇರುತ್ತದೆ. ಪ್ರಸ್ತುತ ರಾಜ್ಯಪಾಲರ ಪತ್ರ ಇನ್ನೂ ಸಿಕ್ಕಿಲ್ಲ. ಪತ್ರ ನೋಡಿದ ನಂತರ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದೇವೇಳೆ ನ್ಯಾ.ವಿಶ್ವನಾಥ ಶೆಟ್ಟಿಯವರ ವಿರುದ್ಧ ಕೇಳಿಬಂದಿರುವ ಆರೋಪ ಕುರಿತಂತೆ ವಿಶ್ವನಾಥ್ ಶೆಟ್ಟಿಯವರನ್ನು ಸಮರ್ಥಿಸಿಕೊಂಡಿರುವ ಅವರು, ನ್ಯಾಯಾಂಗ ಬಡಾವಣೆಯಲ್ಲಿ ಕೇವಲ ವಿಶ್ವನಾಥ ಶೆಟ್ಟಿಯವರೇ ಸೈಟ್ ನ್ನು ಹೊಂದಿಲ್ಲ. ಸಾಕಷ್ಟು ನ್ಯಾಯಾಧೀಶರು ಸೈಟ್ ನ್ನು ಹೊಂದಿದ್ದಾರೆಂದು ತಿಳಿಸಿದರು.

ಲೋಕಾಯುಕ್ತ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು, ನ್ಯಾ.ವಿಶ್ವನಾಥ ಶೆಟ್ಟಿಯವರ ಹೆಸರನ್ನು ಶಿಫಾರಸ್ಸು ಮಾಡುವುದಕ್ಕೂ ಮುನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸಮಿತಿ ಸಲಹೆ ನೀಡಿದ್ದ ಎಲ್ಲಾ ಮೂರು ಹೆಸರುಗಳ ಕುರಿತಂತೆ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿದ್ದರೆ, ರಾಜ್ಯಪಾಲರಿಂದ ಈ ರೀತಿಯ ಮುಖಭಂಗವನ್ನು ಎದುರಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಲೋಕಾಯುಕ್ತ ಹುದ್ದೆ ಪರಿಶುದ್ಧವಾದ ಭ್ರಷ್ಟಾಟಾರ ನಿಗ್ರಹ ಸಂಸ್ಥೆಯಾಗಿದ್ದು, ಸಮಗ್ರತೆ ಹಾಗೂ ಯಾವುದೇ ಕಪ್ಪು ಚುಕ್ಕೆಯನ್ನು ಹೊಂದಿರದ ವ್ಯಕ್ತಿಯನ್ನು ಇದಕ್ಕೆ ಮುಖ್ಯಸ್ಥರನ್ನಾಗಿ ನೇಮಕ ಮಾಡಬೇಕಿದೆ. ಹೀಗಾಗಿ ಲೋಕಾಯುಕ್ತರ ಆಯ್ಕೆ ಕುರಿತಂತೆ ಸಿದ್ದರಾಮಯ್ಯ ಅವರು ತಡ ಮಾಡದೇ ಉನ್ನತ ಮಟ್ಟದ ಸಮಿತಿಯೊಂದಿಗೆ ಸಭೆ ನಡೆಸಬೇಕಿದೆ ಎಂದು ಶೆಟ್ಟರ್ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ಜಗದೀಶ್ ಶೆಟ್ಟರ್ ಅವರೂ ಕೂಡ ಭಾಗವಾಗಿದ್ದು, ಸಮಿತಿಯಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾದೀಶ ಸುಭ್ರೋ ಕಮಲ್ ಮುಖರ್ಜಿ, ವಿಧಾನಸಭೆ ಸ್ಪೀಕರ್ ಕೆ.ಬಿ. ಕೋಳಿವಾಡ, ವಿಧಾನ ಪರಿಷತ್ ಅಧ್ಯಕ್ಷ ಡಿ.ಹೆಚ್. ಶಂಕರಮೂರ್ತಿ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನೂ ಹಲವು ಸದಸ್ಯರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com