ಬೆಳಗಾವಿಯಲ್ಲಿ ಐಟಿ ದಾಳಿ; ಕಾಂಗ್ರೆಸ್ ಮುಖಂಡರ ಮನೆಯಲ್ಲಿ ದಾಖಲೆ ಪರಿಶೀಲನೆ

ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯಲ್ಲಿರುವ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಆದಾಯ ತೆರಿಗೆ ಆಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯಲ್ಲಿರುವ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಆದಾಯ ತೆರಿಗೆ ಆಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿ ಹೊಳಿ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮೀ  ಹೆಬ್ಬಾಳ್ಕರ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು  ಹೇಳಲಾಗುತ್ತಿದ್ದು, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com