ಬಂಧನ ಭೀತಿ: ಕೋರ್ಟ್‌ಗೆ ಶರಣಾದ ಶಾಸಕ ಎಚ್.ಸಿ ಬಾಲಕೃಷ್ಣ

ಧಮ್ಕಿ ಮತ್ತು ಅವಾಚ್ಯ ಶಬ್ಧಗಳಿಂದ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದ ಜೆಡಿಎಸ್ ಬಂಡಾಶ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಸ್ವಯಂ ಪ್ರೇರಿತರಾಗಿ ಕೋರ್ಟ್...
ಎಚ್ ಸಿ ಬಾಲಕೃಷ್ಣ
ಎಚ್ ಸಿ ಬಾಲಕೃಷ್ಣ
Updated on: 
ಕುದೂರು: ಧಮ್ಕಿ ಮತ್ತು ಅವಾಚ್ಯ ಶಬ್ಧಗಳಿಂದ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದ ಜೆಡಿಎಸ್ ಬಂಡಾಶ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಸ್ವಯಂ ಪ್ರೇರಿತರಾಗಿ ಕೋರ್ಟ್ ಮುಂದೆ ಹಾಜರಾಗಿದ್ದಾರೆ. 
ಬಂಧನ ಭೀತಿಯಿಂದ ಬಾಲಕೃಷ್ಣ ಅವರು ಮಾಗಡಿಯ 1ನೇ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರಾದರು. ಮಾಗಡಿ ಸಿಪಿಐ ಎಚ್ ಎಲ್ ನಂದೀಶ್ ಅವರು ಶಾಸಕ ಬಾಲಕೃಷ್ಣ ಸೇರಿದಂತೆ ಒಟ್ಟು 17 ಮಂದಿಯ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. 
ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಕರ್ತವ್ಯಕ್ಕೆ ಅಡ್ಡಿ, ಜನರ ಜಮಾವಣೆ ಸೇರಿದಂತೆ ಐಪಿಸಿ ಸೆಕ್ಷನ್ 341, 352, 353, 504, 506 ಅಡಿಯಲ್ಲಿ ಕೇಸು ದಾಖಲಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com