ಕಾರ್ಯಕಾರಿಣಿಯಲ್ಲೇ ಬಿಜೆಪಿ ನಾಯಕ ಪೊಲೀಸ್ ವಶಕ್ಕೆ; ವಿಚಾರಣೆ ನಂತರ ಬಿಡುಗಡೆ

ಮಹಿಳೆಗೆ ವಂಚನೆ ಮಾಡಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲೇ...
ವೆಂಕಟೇಶ್‌ ಮೌರ್ಯ
ವೆಂಕಟೇಶ್‌ ಮೌರ್ಯ
Updated on: 
ಕಲಬುರಗಿ: ಮಹಿಳೆಗೆ ವಂಚನೆ ಮಾಡಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲೇ ಬಿಜೆಪಿ ನಾಯಕರೊಬ್ಬರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದು ಪಕ್ಷಕ್ಕೆ ಮತ್ತಷ್ಟು ಮುಜುಗರ ತಂದಿಟ್ಟಿದೆ. 
ಬೆಂಗಳೂರಿನ ಉಪ್ಪಾರಪೇಟೆ ಠಾಣೆಯ ಪೊಲೀಸರು ಇಂದು ಕಲಬುರಗಿಯಲ್ಲಿ ಬಿಜೆಪಿ ರಾಷ್ಟ್ರೀಯ ಎಸ್‌ಸಿ ಮೋರ್ಚಾ ಸದಸ್ಯರಾಗಿರುವ ವೆಂಕಟೇಶ್‌ ಮೌರ್ಯ ಅವರನ್ನು ವಶಕ್ಕೆ ಪಡೆದು, ಪ್ರಕರಣ ಸಂಬಂಧ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದಾರೆ.
2011 ರಲ್ಲಿ  ಮೌರ್ಯ ವಿರುದ್ಧ ಮಹಿಳೆಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದರು. ಆಬಳಿಕ ಪೊಲೀಸರು ಇಬ್ಬರ ನಡುವೆ ಸಂಧಾನಕ್ಕೆ ಯತ್ನಿಸಿದ್ದರಾದರೂ ಮಾತುಕತೆ ವಿಫ‌ಲವಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಮೌರ್ಯ ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿಯಾಗುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com