ಹಣ ಹೂಡಿಕೆ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ: ಐಟಿ ಇಲಾಖೆ

ನೋಟು ನಿಷೇಧದ ನಂತರ ಹಲವು ಕ್ಷೇತ್ರಗಳಲ್ಲಿ ಹಣ ಹೂಡಿಕೆ ಬಗ್ಗೆ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ...
ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್
ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ನೋಟು ನಿಷೇಧದ ನಂತರ ಹಲವು ಕ್ಷೇತ್ರಗಳಲ್ಲಿ ಹಣ ಹೂಡಿಕೆ ಬಗ್ಗೆ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ ಕರ್ ಅವರ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ನೋಟು ನಿಷೇಧದ ನಂತರ ಈ ಇಬ್ಬರು ರಾಜಕಾರಣಿಗಳು ಕೋಟಿಗಟ್ಟಲೇ ಹಣ ಹೂಡಿಕೆ ಮಾಡಿದ್ದಾರೆ. ಆದರೆ ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಯಾವುದೇ ಸಣ್ಣ ಮಾಹಿತಿ ಕೂಡ ನೀಡಿರಲಿಲ್ಲ, ಗೋಕಾಕ್ ನಲ್ಲಿರುವ ಜಾರಕಿ ಹೊಳಿ ಮನೆ ಹಾಗೂ ಬೆಳಗಾವಿಯಲ್ಲಿರುವ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ನವೆಂಬರ್ 8 ರನಂತರ ರಮೇಶ್ ಜಾರಕಿಹೊಳಿ ಮತ್ತು ಅವರ ಕಿರಿಯ ಸಹೋದರ ಉದ್ಯಮಿ ಲಖನ್ ಅವರ ವ್ಯವಹಾರದಲ್ಲಿ ಸಾಮಾನ್ಯ ವಹಿವಾಟಿಗಿಂತ ಶೇ30 ರಿಂದ 40 ರಷ್ಟು ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ,

ಇನ್ನು ಸವದತ್ತಿ ತಾಲೂಕಿನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್  ನಿರ್ಮಿಸಲು ಹೊರಟಿರುವ ಸಕ್ಕರೆ ಕಾರ್ಖಾನೆಗೆ  100 ಕೋಟಿ ರು. ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ದಾಖಲೆ ತೋರಿಸಲು ಲಕ್ಷ್ಮಿ ಮತ್ತವರ ಸಂಬಂಧಿಕರು ವಿಫಲರಾಗಿದ್ದಾರೆ.

ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಈಗಲೇ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ,  ತನಿಖೆಯ ನಂತರ ವರದಿಯನ್ನು ಇಲಾಖೆಯ ಆಯುಕ್ತರಿಗೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ದಾಳಿ ಮಾಡುವ ಅಧಿಕಾರವಿದೆ, ಆದರೆ ಕೇವಲ ಕಾಂಗ್ರೆಸ್ ಮುಖಂಡರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com