ರಾಜು ಕಾಗೆ ಪ್ರಕರಣ: ಹಲ್ಲೆ ವೇಳೆ ಬಳಿಸಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲೆ ಬಿಜೆಪಿ ಶಾಸಕ ರಾಜು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲ್ಲೆ ವೇಳೆ ರಾಜು ಕಾಗೆಯವರು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ರಾಜ್ಯದ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ...
ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ
ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ

ಅಥಣಿ: ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲೆ ಬಿಜೆಪಿ ಶಾಸಕ ರಾಜು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲ್ಲೆ ವೇಳೆ ರಾಜು ಕಾಗೆಯವರು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ರಾಜ್ಯದ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆಂಬ ಆರೋಪದ ಮೇಲೆ ಜ.1 ರಂದು ಕಾಂಗ್ರೆಸ್ ಕಾರ್ಯಕರ್ತ ಹಾಗೂ ಉದ್ಯಮಿ ವಿವೇಕ್ ಶೆಟ್ಟಿ ಅವರ ಮನೆಗೆ ನುಗ್ಗಿ ಶಾಸಕ ರಾಜು ಕಾಗೆ ಕುಟುಂಬ ಹಾಗೂ ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದರೆಂದು ಜ.9 ರಂದು ಪ್ರಕರಣವೊಂದು ದಾಖಲಾಗಿತ್ತು. ಹಲ್ಲೆ ನಡೆಸಿದ್ದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಪ್ರಕರಣವಾಗುತ್ತಿದ್ದಂತೆಯೇ ಶಾಸಕ ಕಾಗೆ ಹಾಗೂ ಕುಟುಂಬಸ್ಥರು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ವೀರಭದ್ರಯ್ಯ ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದರು. ಪ್ರಕರಣ ಸಂಬಂಧ ಈ ವರೆಗೂ ರಾಜು ಕಾಗೆ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಇದೀಗ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಹಲ್ಲೆ ವೇಳೆ ಬಳಸಲಾಗಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ರಾಜು ಕಾಗೆ, ರಾಜು ಸಹೋದರ ಸಿದ್ದಗೌಡ ಕಾಗೆ, ಪ್ರಶಾಂತ್ ಕುಮಾರ್ ಕಾಗೆ ಮತ್ತು ಸಂತ್ರಸ್ತ ವಿವೇಕ್ ಶೆಟ್ಟಿಯವರ ಮನೆ ಹಾಗೂ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಈ ವೇಳೆ ಹಲ್ಲೆಗೆ ಬಳಸಲಾಗಿದ್ದ ಚಾಕು, ದೊಣ್ಣೆ, ಕಾರು ಹಾಗೂ ಇನ್ನಿತರೆ ಪ್ರಮುಖ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com