ಕಂಬಳ ಕ್ರೀಡೆಗೆ ವಿಧಿಸಿರುವ ನಿಷೇಧ ತೆರವುಗೊಳಿಸಲು ಆಗ್ರಹ

ಕರ್ನಾಟಕದ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಕರ್ನಾಟಕದ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಿ ಕ್ರೀಡೆಗೆ ಅವಕಾಶ ಮಾಡಿಕೊಡಬೇಕೆಂದು ಕಂಬಳ ಉಳಿಸಿ ಹೋರಾಟ ಸಮಿತಿ ಒತ್ತಾಯಿಸಿದೆ. ಶಾಸಕ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು, ಈ ಕುರಿತು ಹೋರಾಟ ನಡೆಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು 200 ಜೋಡಿ ಕಂಬಳದೊಂದಿಗೆ ಮೂಡಬಿದ್ರೆಯ ಕಡಲಕೆಗೆ ನಿಸರ್ಗಧಾಮದಲ್ಲಿ ಪ್ರತಿಭಟನೆ ನಡೆಸಲಿದೆ. 
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಂಬಳ ಉಳಿಸಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಲಿದ್ದು, ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಚರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದಂತೆ ಕರ್ನಾಟಕದಲ್ಲಿಯೂ ಕಂಬಳ ಆಚರಣೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿವೆ.
ಕಂಬಳ ಕ್ರೀಡೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ಇಂದು ಮೈಸೂರು, ಬೆಂಗಳೂರುಗಳಲ್ಲಿ ಕೂಡ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಆಚರಣೆಗೆ ಕೂಡ ಕೇಂದ್ರ ಸರ್ಕಾರ ಕಾನೂನು ರೀತಿಯ ಅವಕಾಶ ಮಾಡಿಕೊಡಬೇಕು. ಈ ಹಿನ್ನೆಲೆಯಲ್ಲಿ ಇದೇ 25ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು. ಒಂದು ವೇಳೆ ಅವಕಾಶ ಮಾಡಿಕೊಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com