ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನಿರ್ಮಿಸಿರುವ ಅಕ್ರಮ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ನೀಡಲಾಗಿದ್ದ ಗಡುವನ್ನು ಸೋಮವಾರ ವಿಸ್ತರಿಸಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನಿರ್ಮಿಸಿರುವ ಅಕ್ರಮ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ನೀಡಲಾಗಿದ್ದ ಗಡುವನ್ನು ಸೋಮವಾರ ವಿಸ್ತರಿಸಲಾಗಿದೆ.

ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದಲ್ಲಿ 94 ಸಿ, ನಗರ ಪ್ರದೇಶಗಳಲ್ಲಿ 94 ಸಿಸಿ ಅರ್ಜಿಗಳನ್ನು ಸಲ್ಲಿಸುವ ಕಾಲಾವಕಾಶವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.

ನಗರ ಮತ್ತು ಗ್ರಾಮೀಣ ಅಕ್ರಮ-ಸಕ್ರಮಕ್ಕೆ ಈ ಹಿಂದೆ ನಿಗದಿಪಡಿಸಿದ ಶುಲ್ಕವನ್ನು ಶೇ.50ರಷ್ಟು ಕಡಿತಗೊಳಿಸಲಾಗಿದೆ. ಪರಿಶಿಷ್ಠ ಜಾತಿ ಮತ್ತು ಪಂಗಡದವರಿಗೆ ಅರ್ಧದಷ್ಟು ಶುಲ್ಕ ವಿನಾಯಿತಿ ಇರುತ್ತದೆ. ನಗರ ಪ್ರದೇಶಗಳಲ್ಲಿನ 94 ಸಿಸಿ ಕಾಯ್ದೆ ಅನ್ವಯ ಬೆಂಗಳೂರು ಮಹಾನಗ ವ್ಯಾಪ್ತಿಯಲ್ಲಿ 20-30 ವಿಸ್ತೀರ್ಣದ ನಿವೇಶನಕ್ಕೆ ರೂ.10 ಸಾವಿರ ಬದಲು ರೂ. 5 ಸಾವಿರ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ರೂ, 2.500 ದರ ನಿಗದಿ ಮಾಡಲಾಗಿದೆ. ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ನಗರಗಳಲ್ಲಿ ಫೆಬ್ರವರಿ.27 ಹಾಗೂ ಹಳ್ಳಿಗಳಲ್ಲಿ ಫೆ.21ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com